ಮಡಿಕೇರಿ: ‘ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನೇ ಬಳಸಬೇಕು’ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ತಿಳಿಸಿದರು.

ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ‘ನಮ್ಮ ನಡೆ ಹಸಿರೆಡೆಗೆ’ ಅಭಿಯಾನದಲ್ಲಿ ಅವರು ಮಾತನಾಡಿದರು.

‘ಹಸಿರು ಪಟಾಕಿಗಳ ಮೇಲೆ ವಿಶೇಷ ಚಿಹ್ನೆ ಮತ್ತು ಕ್ಯೂಆರ್ ಕೋಡ್ ಇರುತ್ತದೆ. ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಹಸಿರು ಪಟಾಕಿ ಬದಲಿಗೆ ಮಾಲಿನ್ಯಕಾರಿ ಪಟಾಕಿಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಸರ್ಕಾರವು ಕಾನೂನು ಕ್ರಮ ಜರುಗಿಸುತ್ತದೆ’ ಎಂದೂ ಎಚ್ಚರಿಕೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ‘ಪ್ರತಿಯೊಬ್ಬರೂ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ತ್ಯಜಿಸಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು’ ಎಂದು ಹೇಳಿದರು.

ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ‘ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಶಬ್ದ, ವಾಯು ಮತ್ತು ಜಲ, ನೆಲ ಮಾಲಿನ್ಯದ ಜತೆಗೆ ಪ್ರಾಣಿ-ಪಕ್ಷಿ ಜೀವ ಸಂಕುಲಗಳು ಸೇರಿದಂತೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ, ಪರಿಸರ ವ್ಯವಸ್ಥೆಗೂ ತೀವ್ರ ಧಕ್ಕೆಯುಂಟಾಗುತ್ತದೆ’ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ ಪಿ.ಕೆ.ವೆಂಕಟೇಶ್ ಪ್ರಸನ್ನ ಅವರು ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿಯುಳ್ಳ ಕರಪತ್ರ ಬಿಡುಗಡೆಗೊಳಿಸಿದರು.

ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಸಿರು ದೀಪಾವಳಿ ಆಚರಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ದೀಪಾವಳಿ ವೇಳೆ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ಬಿಟ್ಟು ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವುದಾಗಿ ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಶನಿವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು, ಎನ್ಎಸ್ಎಸ್ ಘಟಕದ ಸಹಯೋಗದೊಂದಿಗೆ ಈ ಜಿಲ್ಲಾ ಮಟ್ಟದ ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು.

ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಟಿ.ಎಂ.ಸುಧಾಕರ್, ಸ್ಕೌಟ್ಸ್ ರೋವರ್ಸ್ನ ಲೀಡರ್ ನವೀನ್ ಕುಮಾರ್, ಮಂಡಳಿಯ ಯೋಜನಾ ಸಹಾಯಕ ಆಸ್ಟಿನ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.