ಕುಶಾಲನಗರ: ಹಣತೆ ಬೆಳಗಿಸಿ. ಮಾಲಿನ್ಯ ತಡೆಯಿರಿ, ಮಾಲಿನ್ಯಕಾರಿ ಪಟಾಕಿ ತ್ಯಜಿಸಿ, ಹಸಿರು ಪಟಾಕಿ ಬಳಸಿ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಿ, ಹಸಿರು ದೀಪಾವಳಿ- ಪರಿಸರ ದೀಪಾವಳಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದ ಕೂಡುಮಂಗಳೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಮಾಲಿನ್ಯಮುಕ್ತ ದೀಪಾವಳಿ ಆಚರಣೆ ಕುರಿತು ಜಾಗೃತಿ ಮೂಡಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯಿಂದ ಶಾಲೆಯಲ್ಲಿ ಶನಿವಾರ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಆಂದೋಲನ ನಡೆಯಿತು.

ಪ್ರತಿಜ್ಞಾ ವಿಧಿ ಬೋಧಿಸಿದ ಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ‘ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ
ಪರಿಸರ ವ್ಯವಸ್ಥೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳು ಹಾಗೂ ಅನಾಹುತಗಳ ಬಗ್ಗೆ ವಿವರಿಸಿದರು. ಪಟಾಕಿ ಸಿಡಿಸುವುದರಿಂದ ಉಂಟಾಗುವ ಶಬ್ದ, ವಾಯು ಮತ್ತು ಜಲ ಮಾಲಿನ್ಯ ಹಾಗೂ ನೆಲ ಮಾಲಿನ್ಯದ ಜತೆಗೆ ಪ್ರಾಣಿ - ಪಕ್ಷಿ ಜೀವ ಸಂಕುಲಗಳು ಸೇರಿದಂತೆ
ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತದೆ’ ಎಂದರು.

ಶಾಲೆಯ ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ, ದೀಪಾವಳಿ ಹಬ್ಬದ ಸಂದರ್ಭ ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸಬೇಕು.

ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತಾ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ ಇದ್ದರು.

ಹಸಿರು ದೀಪಾವಳಿ ಜಾಗೃತಿ: ವಿದ್ಯಾರ್ಥಿಗಳು ಅಲಂಕಾರಿಕ ಹಾಗೂ ಪುಷ್ಪಗಳಿಂದ ರಂಗೋಲಿ ಬಿಡಿಸಿ ಗಮನ ಸೆಳೆದರು. ಹಸಿರು ದೀಪಾವಳಿ ಆಚರಣೆ ಕುರಿತು ವಿದ್ಯಾರ್ಥಿಗಳು ಹಾಡಿದರು.

ಗ್ರಾಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಣತೆ ಹಚ್ಚೋಣ, ಹಸಿರು ದೀಪಾವಳಿ ಆಚರಿಸೋಣ, ಮಾಲಿನ್ಯ ಪಟಾಕಿ ತ್ಯಜಿಸೋಣ ಮಾಲಿನ್ಯ ತಡೆಯೋಣ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ, ಪರಿಸರ ಸಂರಕ್ಷಿಸೋಣ ಬನ್ನಿ ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.