ಗೋಣಿಕೊಪ್ಪಲು: ಸರ್ಕಾರ ಹೊಸದಾಗಿ ರಚನೆ ಮಾಡಿರುವ ಮಹಿಳೆಯರ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಫಲಾನುಭವಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅಪ್ಪಣ್ಣ ಹೇಳಿದರು.

ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ‘ಗೃಹಲಕ್ಷ್ಮಿ ಯೋಜನೆಯಲ್ಲಿ 117 ಫಲಾನುಭವಿಗಳಿಗೆ ಸೆಪ್ಟಂಬರ್ವರೆಗೆ ಹಣ ಪಾವತಿಯಾಗಿದೆ. ಇನ್ನುಳಿದ ಐದು ತಿಂಗಳ ಹಣ ಕೂಡಲೆ ಬಿಡುಗಡೆಯಾಗಲಿದೆ’ ಎಂದು ತಿಳಿಸಿದರು.

‘ಸೆಪ್ಟೆಂಬರ್ವರೆಗೆ ಹೊಸದಾಗಿ 720 ಫಲಾನುಭವಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಐಟಿ ಮತ್ತು ಜಿಎಸ್ಟಿ ಪಾವತಿಸುತ್ತಿರುವ ಫಲಾನುಭವಿಗಳಿಗೆ ಕೆಲವು ತಾಂತ್ರಿಕ ಅಡಚಣೆಯಾಗಿದೆ’ ಎಂದು ಹೇಳಿದರು.

‘ಅನ್ನಭಾಗ್ಯ’ ಯೋಜನೆಯಡಿಯಲ್ಲಿ ಪಡಿತರ ಪಡೆಯುತ್ತಿದ್ದ ಕೆಲವರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಇದರ ಬಗ್ಗೆ ಗಂಭೀರವಾಗಿ ಗಮನಹರಿಸಿ ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

‘ಗೃಹಜ್ಯೋತಿ’, ‘ಯುವನಿಧಿ’ ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು.

ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಧಿಕಾರಿಗಳು ಸರ್ಕಾರದ ಎಲ್ಲ ಯೋಜನೆಗಳು ಫಲಾನುಭವಿಗಳಿಗೆ ದೊರಕುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.