ಸೋಮವಾರಪೇಟೆ: ‘ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಜನರಲ್ಲಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದರೆ, ಸರ್ಕಾರದ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.ಅಧಿಕಾರಿಗಳು ಪ್ರಾಮಾಣಿಕವಾಗಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕಾಗಿದೆ’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್ ಹೇಳಿದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಕ್ತಿ ಯೋಜನೆ, ಅನ್ಮಭಾಗ್ಯ, ಗೃಹಜ್ಯೋತಿ, ಯುವನಿಧಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ರಾಜ್ಯದಾದ್ಯಂತ ಶೇಕಡ 80 ರಷ್ಟು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಅಭಿವೃದ್ದಿ ಎಂದರೆ ಕೇವಲ ರಸ್ತೆಗಳನ್ನು ಮಾಡುವುದಲ್ಲ. ಬಡವರ ಕುಟುಂಬದ ಕಲ್ಯಾಣವಾಗಬೇಕು. ಐದು ಗ್ಯಾರಂಟಿ ಯೋಜನೆ ಪ್ರಯೋಜನ ಪಡೆಯುತ್ತಿರುವ ಪ್ರತಿ ಕುಟುಂಬದ ಸುಮಾರು ₹7 ಸಾವಿರ ಖರ್ಚನ್ನು ಸರ್ಕಾರವೇ ಭರಿಸುತ್ತಿದೆ. ಗೃಹಲಕ್ಷ್ಮೀ ಯೋಜನೆಯ ಹಣ ಕೆಲವು ತಾಂತ್ರಿಕ ತೊಂದರೆಯಿಂದ ಸಮಸ್ಯೆಯಾಗಿದೆಯೇ ಹೊರತು ಕಳೆದ ಎರಡು ಮೂರು ತಿಂಗಳ ಹಣ ಒಟ್ಟಿಗೇ ಜಮೆಯಾಗಲಿದೆ’ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.

‘ಗೃಹಲಕ್ಷ್ಮೀ ಯೋಜನೆಯಡಿ ಸೋಮವಾರಪೇಟೆ ತಾಲ್ಲೂಕಿನಲ್ಲಿ ₹4,91,66,000 ಫಲಾನುಭವಿಗಳ ಖಾತೆಗೆ ಜಮೆಯಾಗಿವೆ. ಸೆಸ್ಕ್ ಇಲಾಖೆ ಬಿಲ್ ₹98 ಕೋಟಿ ಪಾವತಿ ಆಗಿದೆ. ತಾಲ್ಲೂಕಿನಲ್ಲಿ ಅನ್ನಭಾಗ್ಯ ಯೋಜನೆಗೆ ಸಂಬಂದಿಸಿದಂತೆ 1251 ಅಂತ್ಯೋದಯ ಕಾರ್ಡ್ 22,590 ಬಿ.ಪಿ.ಎಲ್ ಕಾರ್ಡ್ 4616 ಎ.ಪಿ.ಎಲ್ ಕಾರ್ಡ್ ಗಳಿದ್ದು 300 ಅರ್ಜಿಗಳು ವಿಲೇವಾರಿಯಾಗಿಲ್ಲ ಎಂದು ಹೇಳಿದರು.

ಸೋಮವಾರಪೇಟೆಯಿಂದ ಮಡಿಕೇರಿ ಹಾಗೂ ಮಡಿಕೇರಿಯಿಂದ ಬೆಳಿಗ್ಗೆ ಹಾಗೂ ಸಂಜೆ ವೇಳೆ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ತೊಂದರೆಯಾಗುತ್ತಿದೆ ಎಂಬುದನ್ನು ಮನಗಂಡ ಅನುಷ್ಠಾನ ಸಮಿತಿ ಉಪಾಧ್ಯಕ್ಷರು ಒಂದು ವಾರದೊಳಗೆ ಈ ಸಮಸ್ಯೆ ಪರಿಹರಿಸುವಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಡಿಕೇರಿ ಘಟಕ ವ್ಯವಸ್ಥಾಪಕ ಮಹಮ್ಮದ್ ಆಲಿ ಅವರಿಗೆ ಸೂಚನೆ ನೀಡಿದರು.

ಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಂತರಾಜ್, ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.