ಕುಶಾಲನಗರ: ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಕೊಡಗಿನ ಹಾರಂಗಿ ಅಣೆಕಟ್ಟೆಗೆ ಮಂಗಳವಾರ ಕಾವೇರಿ ನೀರಾವರಿ ನಿಗಮದ ಗೊರೂರು ವಲಯದ ಮುಖ್ಯ ಎಂಜಿನಿಯರ್ ಬಿ.ಭೀಮಾನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗು ಜಿಲ್ಲೆಯಲ್ಲಿ ಜೂನ್ನಲ್ಲಿ ಮುಂಗಾರು ಆರಂಭವಾಗುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಹಾಗೂ ಭದ್ರತೆ ಕುರಿತು ಅಣೆಕಟ್ಟೆಯ ಕ್ರೆಸ್ಟ್ ಗೇಟ್ಗಳನ್ನು ಪರಿಶೀಲಿಸಿದರು. ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹಾರಂಗಿ ಅಣೆಕಟ್ಟೆ ವಿಭಾಗದ ಎಂಜಿನಿಯರ್ಗಳೊಂದಿಗೆ ಚರ್ಚೆ ನಡೆಸಿದರು. ಜಲಾಶಯಕ್ಕೆ ಒಳ ಹರಿವು ಹಾಗೂ ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದರು. ಹಾರಂಗಿ ನೀರಾವರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಸತೀಶ್, ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ, ಸಹಾಯಕ ಎಂಜಿನಿಯರ್ ಟಿ.ಎ.ಅನ್ನಪೂರ್ಣ, ಕವಿಪ್ರಸಾದ್, ಕಿರಣ್, ದೇವಯ್ಯ, ಸೌಮ್ಯ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-287915578

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.