ಮಡಿಕೇರಿ: ಕಾವೇರಿ ಕಣಿವೆಯ ಪ್ರಮುಖ ಜಲಾಶಯವಾದ ಹಾರಂಗಿಯು ಭರ್ತಿಯಾಗಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಬಾಗಿನ ಅರ್ಪಿಸಿದರು.
ಬಳಿಕ ಮಾತನಾಡಿದ ಸೋಮಣ್ಣ, ಪ್ರಕೃತಿಯ ಆಶೀರ್ವಾದದಿಂದ ಎರಡು ವರ್ಷದಿಂದ ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಎಲ್ಲಿಯೂ ಬರ ಪರಿಸ್ಥಿತಿ ಕಾಣಿಸಿಕೊಂಡಿಲ್ಲ. ಈ ವರ್ಷವೂ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಅತಿವೃಷ್ಟಿಯಿಂದ ಕೆಲವು ಕಡೆ ಜನರಿಗೆ ತೊಂದರೆಯಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಸಂಸದ ಪ್ರತಾಪ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಎ.ಟಿ.ರಾಮಸ್ವಾಮಿ, ಮಹದೇವ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಜರಿದ್ದರು.
ಜಲಾಶಯದ ಗರಿಷ್ಠ ಮಟ್ಟವು 2,859 ಅಡಿಗಳಾಗಿದ್ದು ಶುಕ್ರವಾರ ಬೆಳಿಗ್ಗೆ 11 ಗಂಟೆಯ ವೇಳೆಗೆ 2,857.07 ಅಡಿಯಷ್ಟು ನೀರು ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು ಹಾರಂಗಿಯಿಂದ ನದಿಗೆ 8,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.