ಮಡಿಕೇರಿ: ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಹಾರಂಗಿ ಜಲಾಶಯದಿಂದ ಮೇ 9ರಿಂದ 13ರವರೆಗೆ ನಿತ್ಯ 500 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತದೆ.

ಕೊಡಗು ಜಿಲ್ಲೆಯ ಕುಶಾಲನಗರ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ, ಸಾಲಿಗ್ರಾಮ ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕುಗಳಿಗೆ ಇದರಿಂದ ಪ್ರಯೋಜನವಾಗಲಿದೆ.

ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿರುವ ಹಾಗೂ ನದಿಯ ಎರಡೂ ಬದಿಗಳಲ್ಲಿ ವಾಸಿಸುತ್ತಿರುವ ಜನ ಆಸ್ತಿ, ಜಾನುವಾರುಗಳ ರಕ್ಷಣೆ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹಾರಂಗಿ ಪುನರ್ವಸತಿ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ತಿಳಿಸಿದ್ದಾರೆ.

ಗರಿಷ್ಠ 2,859 ಅಡಿ ಇರುವ ಹಾರಂಗಿ ಜಲಾಶಯದಲ್ಲಿ 2,827.22 ಅಡಿಗಳಷ್ಟು ನೀರಿದೆ.

ಕಳೆದ ವರ್ಷ ಇದೇ ವೇಳೆ 2,831.78 ಅಡಿ ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 4.56 ಅಡಿಗಳಷ್ಟು ನೀರು ಕಡಿಮೆ ಇದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-38-989493546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.