ಮಡಿಕೇರಿ: ವಿವಾಹಿತ ಮಹಿಳೆಗೆ ನಗರದ ಯುವಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿ, ಕಿರುಕುಳ ನೀಡುತ್ತಿದ್ದ ಆಪಾದನೆ ಮೇರೆಗೆ ಆತನಿಗೆ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಥಳಿಸಿದ ವಿಡಿಯೊ ವೈರಲ್ ಆಗಿದೆ.
ನಗರದಲ್ಲಿ ಮೊಬೈಲ್ ಹಾಗೂ ಕರೆನ್ಸಿ ಅಂಗಡಿ ನಡೆಸುತ್ತಿದ್ದ ಮಹಮ್ಮದ್ ಮುದಾಸಿರ್ ಎಂಬಾತ ತಮ್ಮ ಮೊಬೈಲ್‍ಗಳಿಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಮಹಿಳೆಯ ಮೊಬೈಲ್ ಸಂಖ್ಯೆ ಬರೆದುಕೊಂಡು ಅದಕ್ಕೆ ಅಶ್ಲೀಲ ಸಂದೇಶ ಕಳುಹಿಸಿ, ಕಿರುಕುಳು ನೀಡುತ್ತಿದ್ದ ಎನ್ನಲಾಗಿದೆ. ಎರಡು ದಿನಗಳಿಂದ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ಸದಸ್ಯರಿಗೆ ಬಳಿ ಅಳಲು ತೋಡಿಕೊಂಡಿದ್ದರು.
ಯುವಕನಿಗೆ ಬುದ್ಧಿ ಕಲಿಸಲು ವೇದಿಕೆ ಸದಸ್ಯರು ಯೋಜನೆ ರೂಪಿಸಿ, ಆ ಮಹಿಳೆಯ ಮೊಬೈಲ್ ಮೂಲಕವೇ ‘ಹಳೇ ಆರ್‌ಟಿಒ ಕಚೇರಿ ಬಳಿಗೆ ಬಂದರೆ ಮಾತನಾಡೋಣ’ ಎಂಬ ಸಂದೇಶ ಕಳುಹಿಸಿದ್ದರು. ಅಲ್ಲಿಗೆ ಗುರುವಾರ ಸಂಜೆ ಬಂದ ಯುವಕನಿಗೆ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಮಹಿಳೆ ಥಳಿಸಿದ್ದಾರೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಈಗ ಥಳಿಸಿದವರು ಮೇಲೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.