ಸುಂಟಿಕೊಪ್ಪ: ‘ಮಹಿಳೆಯರು ಮತ್ತು ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ವಹಿಸಬೇಡಿ’ ಎಂದು ಆರೋಗ್ಯ ಸುರಕ್ಷಾ ಅಧಿಕಾರಿ ಸಿ.ಲತಾಕುಮಾರಿ ಹೇಳಿದರು.

ಸಮೀಪದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಾನ್ಬೈಲ್ ಸರ್ಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಭಾನುವಾರ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಯಾವುದೇ ರೀತಿಯಿಂದಲೂ ಮಹಿಳೆಯರು, ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಾಗ ನುರಿತ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದರು.

‘ಸರ್ಕಾರವು ಪೋಷಣ್ ಅಭಿಯಾನ ಯೋಜನೆಯನ್ನು ಜಾರಿಗೆ ತಂದಿದ್ದು, ಜನತೆಯು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮೀಣ ಭಾಗದವರ ಉತ್ತಮ ಆರೋಗ್ಯಕ್ಕಾಗಿಯೇ ಯೋಜನೆ ಜಾರಿಗೆ ತರಲಾಗಿದೆ’ ಎಂದು ಹೇಳಿದರು.

ನಾಕೂರು ಶಿರಂಗಾಲ ಪಿಡಿಒ ವಿ.ಯು. ಆಸ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಯೋಜನೆ ಬಗ್ಗೆ ಮಾಹಿತಿ ನೀಡಿದರು.

ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೆ.ಎಸ್.ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಮಂದೋಡಿ ಜಗನ್ನಾಥ್, ನಿಕಟಪೂರ್ವ ಉಪಾಧ್ಯಕ್ಷ ಬಿ.ಈ.ಸತೀಶ, ಸದಸ್ಯರಾದ ರಾಧಮಣಿ, ಅರುಣ್ ಕುಮಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್, ಅಧಿಕಾರಿ ರೋಶಿತಾ, ಶಿಕ್ಷಕರಾದ ಪಾರ್ವತಿ, ಮಾಲಾದೇವಿ, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಫ್ರೆಂಡ್ಸ್ ಯೂತ್ ಕ್ಲಬ್ನ ಅಧ್ಯಕ್ಷ ಶಂಕರನಾರಾಯಣ ಇದ್ದರು. ಅಂಗನವಾಡಿ ಕಾರ್ಯಕರ್ತೆಯರಾದ ಯೋಗಿತಾ, ಶುಭಾ, ವಿಶಾಲಕ್ಷಿ, ಧನಲಕ್ಷ್ಮಿ, ಶೋಭಾವತಿ, ಸರಳಾ, ಕಾವ್ಯ, ಕೆ.ಜೆ.ಲೀಲಾವತಿ, ಎಸ್.ಎನ್.ಸಾವಿತ್ರಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.