ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಸದ್ಯದಲ್ಲೆ ಹೃದಯ ಚಿಕಿತ್ಸಾ ಕೇಂದ್ರ: ಸಚಿವ ಡಾ.ಶರಣಪ್ರಕಾಶ್ ಪಾಟೀಲ

Published 6 ಜುಲೈ 2024, 6:07 IST
Last Updated 6 ಜುಲೈ 2024, 6:07 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸಾ ಕೇಂದ್ರವು ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದರು.‌

ಈ ಕುರಿತು ಅವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ಖಾಸಗಿ – ಸಾರ್ವಜನಿಕರ ಸಹಭಾಗಿತ್ವದಲ್ಲಿ ಆದಷ್ಟು ಬೇಗ ಈ ಕೇಂದ್ರ ತೆರೆಯುವಂತೆ ಸೂಚಿಸಿದರು.

300 ಹಾಸಿಗೆ ಆಸ್ಪತ್ರೆ ಅರ್ಧಕ್ಕೆ ನಿಂತಿದೆ. ಈಗ 2 ಅಂತಸ್ತುಗಳು ಪೂರ್ಣಗೊಂಡಿವೆ. ಉಳಿದೆರಡು ಅಂತಸ್ತುಗಳು ಪೂರ್ಣಗೊಳ್ಳಲು ಇನ್ನೂ ₹ 55ರಿಂದ 56 ಕೋಟಿ ರೂಪಾಯಿ ಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಇನ್ನೊಮ್ಮೆ ಪರಿಶೀಲಿಸಿ ಪ್ರಸ್ತಾವ ನೀಡಿ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗುವುದು ಎಂದರು.

ಇನ್ನು 45 ದಿನಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಕಾರ್ಯನಿರ್ವಹಿಸಬೇಕು. ಅದರ ಉದ್ಘಾಟನೆಗೆ ಬರುತ್ತೇನೆ. ಅಷ್ಟರಲ್ಲಿ ವಿದ್ಯಾರ್ಥಿಗಳು ಪ್ರಸ್ತಾಪಿಸಿದ ಸಮಸ್ಯೆಗಳು ನಿವಾರಣೆಯಾಗಿರಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT