ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ, ಮಡಿಕೇರಿ, ನಾಪೋಕ್ಲು ಭಾಗದಲ್ಲಿ ಶುಕ್ರವಾರ ಗುಡುಗು–ಸಿಡಿಲು ಸಹಿತ ಬಿರುಸಿನ ಮಳೆ ಸುರಿದಿದೆ.

ಸೋಮವಾರಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿಯಿತು. ತಂಪೆರೆದ ಮಳೆಯು, ಕಾಳು ಮೆಣಸಿನ ಫಸಲಿಗೆ ಅನುಕೂಲ ತಂದಿದೆ. ಕುಶಾಲನಗರದ ಆನೆಕಾಡು ಭಾಗದಲ್ಲೂ ಜೋರು ಮಳೆಯಾಯಿತು.

ಚಾಮರಾಜನಗರ ಜಿಲ್ಲೆ ಮಹದೇಶ್ವರಬೆಟ್ಟ ಅರ್ಧಗಂಟೆಗೂ ಹೆಚ್ಚು ಸಮಯ ಮಳೆಯಾಯಿತು.

ಚಿಕ್ಕಬಳ್ಳಾಪುರ ವರದಿ: ಜಿಲ್ಲೆಯ ಬಾಗೇಪಲ್ಲಿ ಮತ್ತು ಚೇಳೂರು ತಾಲ್ಲೂಕಿನ ವಿವಿಧ ಕಡೆ ಶುಕ್ರವಾರ ಸಂಜೆ ಉತ್ತಮ ಮಳೆ ಸುರಿಯಿತು.

ಚಾಕವೇಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕನಕಮಾಕಪಲ್ಲಿ ಗ್ರಾಮದಲ್ಲಿ ರೈತರೊಬ್ಬರು ಬೆಳೆದಿದ್ದ ಎರಡು ಎಕರೆ ಹಿರೇಕಾಯಿ ಬೆಳೆ ಮಳೆಯಿಂದಾಗಿ ನೆಲಕಚ್ಚಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.