ಮಡಿಕೇರಿ: ಕೊಡಗಿನಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದ್ದು, ಭಾನುವಾರ ದಿನವಿಡೀ ಧಾರಾಕಾರ ಮಳೆಯಾಗಿದೆ.

ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಮಡಿಕೇರಿ, ಸಿದ್ದಾಪುರ, ಚೆಟ್ಟಳ್ಳಿ, ಪೊನ್ನಂಪೇಟೆ, ಶ್ರೀಮಂಗಲ, ಹುದಿಕೇರಿ, ಸಂಪಾಜೆ, ಶಾಂತಳ್ಳಿ ಭಾಗದಲ್ಲೂ ಜೋರು ಮಳೆಯಾಗಿದೆ. ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಜಲಾಶಯದ ಒಳಹರಿವು ಮತ್ತೆ ಏರಿಕೆಯಾಗಿದೆ.

ಜುಲೈ ತಿಂಗಳಲ್ಲಿ ವಾಡಿಕೆಯಷ್ಟು ಮಳೆ ಸುರಿದಿರಲಿಲ್ಲ. ಆಗಸ್ಟ್ ಮೊದಲ ವಾರವೇ ಮಳೆ ಬಿರುಸು ಪಡೆದಿದ್ದು ಕೃಷಿಕರಲ್ಲಿ ಹರ್ಷ ಮೂಡಿಸಿದೆ. ಕೃಷಿ ಚಟುವಟಿಕೆಗಳೂ ಚುರುಕುಗೊಂಡಿವೆ.

ಆಗಸ್ಟ್ 3ರಿಂದ 7ರ ತನಕ ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.