ಮಂಗಳವಾರ, ಆಗಸ್ಟ್ 11, 2020
26 °C

ಕೊಡಗಿನಲ್ಲಿ ಮತ್ತೆ ಚುರುಕು ಪಡೆದ ಮುಂಗಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗಿನಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದ್ದು, ಭಾನುವಾರ ದಿನವಿಡೀ ಧಾರಾಕಾರ ಮಳೆಯಾಗಿದೆ.

ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಮಡಿಕೇರಿ, ಸಿದ್ದಾಪುರ, ಚೆಟ್ಟಳ್ಳಿ, ಪೊನ್ನಂಪೇಟೆ, ಶ್ರೀಮಂಗಲ, ಹುದಿಕೇರಿ, ಸಂಪಾಜೆ, ಶಾಂತಳ್ಳಿ ಭಾಗದಲ್ಲೂ ಜೋರು ಮಳೆಯಾಗಿದೆ. ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಜಲಾಶಯದ ಒಳಹರಿವು ಮತ್ತೆ ಏರಿಕೆಯಾಗಿದೆ.

ಜುಲೈ ತಿಂಗಳಲ್ಲಿ ವಾಡಿಕೆಯಷ್ಟು ಮಳೆ ಸುರಿದಿರಲಿಲ್ಲ. ಆಗಸ್ಟ್‌ ಮೊದಲ ವಾರವೇ ಮಳೆ ಬಿರುಸು ಪಡೆದಿದ್ದು ಕೃಷಿಕರಲ್ಲಿ ಹರ್ಷ ಮೂಡಿಸಿದೆ. ಕೃಷಿ ಚಟುವಟಿಕೆಗಳೂ ಚುರುಕುಗೊಂಡಿವೆ.

ಆಗಸ್ಟ್‌ 3ರಿಂದ 7ರ ತನಕ ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಕೋರಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು