ಕೊಡಗು: ಧಾರಾಕಾರ ಮಳೆ, ಅಪಾಯದಂಚಿನಲ್ಲಿ ವಾಸಿಸುತ್ತಿರುವವರಿಗೆ ಎಚ್ಚರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿ ನದಿಯಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಒಳಹರಿವು 7,753 ಕ್ಯುಸೆಕ್‌ಗೆ ಏರಿಕೆಯಾಗಿದೆ. ಮಂಗಳವಾರ ಸಂಜೆ ವೇಳೆಗೆ 3,589 ಕ್ಯುಸೆಕ್ ಇತ್ತು. ಅಪಾಯದ ಸ್ಥಳದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಮಾಗಡಿ ರಸ್ತೆಯಲ್ಲಿ ಆತಂಕ: ಜಲಮಂಡಳಿ ಕಾಮಗಾರಿ ವೇಳೆ ವಾಲಿದ 4 ಅಂತಸ್ತಿನ ಕಟ್ಟಡ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.