ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಡಿಕೇರಿ | ಬಿರುಸಿನಿಂದ ಸುರಿಯುತ್ತಿರುವ ಭಾರಿ ಮಳೆ

Published 27 ಜೂನ್ 2024, 3:20 IST
Last Updated 27 ಜೂನ್ 2024, 3:20 IST
ಅಕ್ಷರ ಗಾತ್ರ

ಮಡಿಕೇರಿ: ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೇ ಭಾರಿ ಮಳೆ ಸುರಿಯುತ್ತಿದೆ. ಗುರುವಾರ ಬೆಳಿಗ್ಗೆಯೂ ಮಳೆಯ ಬಿರುಸು ತಗ್ಗಿಲ್ಲ. ಬಿರುಸಿನ ಗಾಳಿಯೂ ಬೀಸುತ್ತಿದೆ.

ಇಲ್ಲಿನ ಮಲ್ಲಿಕಾರ್ಜುನ ನಗರದ ಸುಲೇಮಾನ್ ಎಂಬುವವರ ಮನೆಯ ಹಿಂದೆ ಮಣ್ಣು ಕುಸಿದಿದೆ. ಬೆಳಿಗ್ಗೆಯೇ ಕಾರ್ಯಾಚರಣೆ ಕೈಗೊಂಡ ನಗರಸಭೆ ಸಿಬ್ಬಂದಿ ಮಣ್ಣನ್ನು ತೆರೆವುಗೊಳಿಸಿದ್ದಾರೆ.

ಮಳೆ ತೀವ್ರ ಸ್ವರೂಪ ಪಡೆದುಕೊಂಡಿರುವುದರಿಂದ ಈಗಾಗಲೇ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವೂ ಸನ್ನದ್ಧ ಸ್ಥಿತಿಯಲ್ಲಿದ್ದು, ಪರಿಸ್ಥಿತಿ ಮೇಲೆ ನಿಗಾ ಇರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT