ಶನಿವಾರಸಂತೆ: ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ, ಮಳೆಗೆ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಹಳ್ಳಿ ಗ್ರಾಮದ ಸುರೇಶ್ ಎಂಬುವವರಿಗೆ ಸೇರಿದ ವಾಸದ ಮನೆ ಬಿದ್ದು ಹೋಗಿದೆ.
ಈ ವೇಳೆ ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆ ಮಾಲೀಕ ಸುರೇಶ್ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಸೋಮವಾರಪೇಟೆ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.