ಮಂಗಳವಾರ, ಸೆಪ್ಟೆಂಬರ್ 22, 2020
25 °C

ಕೊಡಗಿನಲ್ಲಿ ಭಾರಿ ಮಳೆ: ಪ್ರವಾಹದ ಭೀತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಂಗಳವಾರವೂ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು ಪ್ರವಾಹದ ಆತಂಕ ಎದುರಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ.

ನಾಪೋಕ್ಲು, ಭಾಗಮಂಡಲ ರಸ್ತೆಯ ಮೇಲೆ ಕಾವೇರಿ ನೀರು ಹರಿಯುತ್ತಿದೆ. ಜಿಲ್ಲೆಯಲ್ಲಿ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. 

ಸೋಮವಾರಪೇಟೆ, ಗರಗಂದೂರು, ಮಾದಾಪುರ, ಜಂಬೂರು, ಮುಕ್ಕೊಡ್ಲು, ಗಾಳಿಬೀಡು, ಕಾಲೂರು ಭಾಗದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. 

5,500 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಸಂಜೆಯ ವೇಳೆಗೆ ಇನ್ನು ಹೆಚ್ಚಿನ ಪ್ರಮಾಣದ ನೀರನ್ನು ನದಿ ಬಿಡುವ ಸಾಧ್ಯತೆಯಿದೆ. ಕೂಡಿಗೆ, ಕುಶಾಲನಗರ ಕಾವೇರಿ ನದಿಯು ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಲಾಗಿದೆ. 

ಜಿಲ್ಲೆಯಲ್ಲಿ ಎನ್‌ಡಿಆರ್‌ಎಫ್‌: ಕಳೆದ ಜೂನ್‌ನಿಂದಲೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ಜಿಲ್ಲೆಯಲ್ಲೀ ಬೀಡುಬಿಟ್ಟಿದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಮಳೆಯಿಂದ ಅನಾಹುತ ಸಂಭವಿಸಿದರೆ ರಕ್ಷಣಾ ಕಾರ್ಯಕ್ಕೆ ತೆರಳಲು ಈ ತಂಡವು ಸಜ್ಜಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು