ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಅಬ್ಬಿ ಫಾಲ್ಸ್‌ ರಸ್ತೆಯಲ್ಲಿ ಧರೆಗುರುಳಿದ ಮರ, ಸಂಚಾರ ದಟ್ಟಣೆ

Published 22 ಜುಲೈ 2023, 8:30 IST
Last Updated 22 ಜುಲೈ 2023, 8:30 IST
ಅಕ್ಷರ ಗಾತ್ರ

ಮಡಿಕೇರಿ: ಇಲ್ಲಿನ ಅಬ್ಬಿ ಫಾಲ್ಸ್‌ ಹೋಗುವ ರಸ್ತೆಯಲ್ಲಿ ಶನಿವಾರ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಸ್ಥಳಕ್ಕೆ ಬಂದ ಸೆಸ್ಕ್‌ ಸಿಬ್ಬಂದಿ ಮರ ತೆರವುಗೊಳಿಸುತ್ತಿದ್ದಾರೆ. ಇದರಿಂದ ಸುಮಾರು ಒಂದೂವರೆ ಕಿ.ಮೀ ಉದ್ದದ ಸಂಚಾರ ದಟ್ಟಣೆ ಉಂಟಾಗಿತ್ತು.

ಕೆ.ನಿಡುಗಣೆ, ಹೆಬ್ಬಟ್ಟಗೇರಿ, ನಂದಿಮೊಟ್ಟೆ ಸುತ್ತಮುತ್ತಲ ಗ್ರಾಮಗಳ ಜನರು, ವಿದ್ಯಾರ್ಥಿಗಳು ಮಡಿಕೇರಿಗೆ ಬರಲು ಸಮಸ್ಯೆ ಎದುರಾಯಿತು. ಬಹುಪಾಲು ವಿದ್ಯಾರ್ಥಿಗಳು ವಾಪಸ್ ತೆರಳಿದರು.

ಮಡಿಕೇರಿ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಹೆಚ್ಚಿನ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮರಗಳು ಧರೆಗುರುಳುತ್ತಿವೆ. ಇದರಿಂದ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT