ಸೋಮವಾರಪೇಟೆ: ‘ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾದಲ್ಲಿ ಮಾತ್ರ ಸಮಸ್ಯೆಗಳು ತನ್ನಿಂತಾನೇ ಬಗೆಹರಿಯುತ್ತವೆ’ ಎಂದು ಯಸಳೂರು ತೆಂಕಲಗೋಡು ಮಠಾಧೀಶ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಶಾಂತಳ್ಳಿಯ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಈಚೆಗೆ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷ ಸ್ಥಾನಮಾನವಿದೆ. ಪವಿತ್ರವಾದ ನಾಡಿನಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಇತರ ಎಲ್ಲಾ ಧರ್ಮದವರಿಗೆ ಜೀವಿಸಲು ಸಾಕಷ್ಟು ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ತಮ್ಮ ಧರ್ಮದ ಅನುಸಾರ ಜೀವನ ನಡೆಸಲು ಇರುವುದೊಂದೇ ಹಿಂದೂಸ್ಥಾನ. ಇದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಯುವ ಜನಾಂಗ ದೇಶಪ್ರೇಮ, ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ರಾಷ್ಟ್ರಕ್ಕಾಗಿ ಬದುಕುವ ಸಂಕಲ್ಪ ತೊಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಕೇವಲ ಹಣ ಗಳಿಸುವ ಶಿಕ್ಷಣ ನೀಡಿದರಷ್ಟೇ ಸಾಲದು; ಸಂಸ್ಕಾರಯುತ ಶಿಕ್ಷಣ ನೀಡಬೇಕು’ ಎಂದು ಕಿವಿಮಾತು ನುಡಿದರು.

ಕಾರ್ಯಕ್ರಮದಲ್ಲಿ ದಿಕ್ಸೂಚಿ ಬಾಷಣ ಮಾಡಿದ ಮಂಗಳೂರು ವಿಭಾಗ ಸಹ ವ್ಯವಸ್ಥಾ ಪ್ರಮುಖ್ ಸ್ವಾಮಿಪ್ರಸಾದ್, ‘ರಾಷ್ಟ್ರ, ಧರ್ಮ, ಸಂಸ್ಕೃತಿ ರಕ್ಷಣೆಯಲ್ಲಿ ನಮ್ಮ ಪಾತ್ರ ಏನು ಎಂಬುದರ ಬಗ್ಗೆ ಜಾಗೃತಗೊಳ್ಳಲು ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ದೇಶದಲ್ಲಿ 80 ಸಾವಿರ ಕಡೆಗಳಲ್ಲಿ ಹಿಂದೂ ಸಂಗಮ ನಡೆಯುತ್ತಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಹಿರಿಯರಾದ ಕಾಳಪ್ಪ ವಹಿಸಿದ್ದರು. ವೇದಿಕೆಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಗೌರವಾಧ್ಯಕ್ಷ ಎಸ್.ಜಿ. ಮೇದಪ್ಪ, ಅಧ್ಯಕ್ಷ ಲಿಂಗರಾಜು ಇದ್ದರು.

ತಲ್ತರೆ ಜಂಕ್ಷನ್ನಿಂದ ಭಾರತ ಮಾತೆಯ ಭಾವಚಿತ್ರದ ಶೋಭಾಯಾತ್ರೆ ನಡೆಯಿತು. ಮಹಿಳೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಪುಟಾಣಿ ಮಕ್ಕಳು ಶಿವಾಜಿ, ಸುಭಾಷ್ ಚಂದ್ರಬೋಸ್, ಒನಕೆ ಓಬವ್ವ, ವಿವೇಕಾನಂದ, ಭಗತ್ ಸಿಂಗ್, ಕಿತ್ತೂರು ರಾಣಿ ಚನ್ನಮ್ಮ, ಶ್ರೀರಾಮ, ಕೃಷ್ಣ, ಆಂಜನೇಯನ ಛದ್ಮವೇಷ ಧರಿಸಿ ಸಂಭ್ರಮದಿಂದ ಸಾಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.