ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಸಿಬ್ಬಂದಿ ನೇಮಕ: ಶೀಘ್ರ ಕ್ರಮ

Last Updated 7 ಮೇ 2021, 4:17 IST
ಅಕ್ಷರ ಗಾತ್ರ

ಸೋಮವಾರಪೇಟೆ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಗುರುವಾರ ಭೇಟಿ ನೀಡಿಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

ನಂತರ ಮಾತನಾಡಿದ ಸಚಿವರು, ‘ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಇಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ 100 ಹಾಸಿಗೆಗಳ ವ್ಯವಸ್ಥೆ ಮಾಡಬೇಕು. ಈಗ ಎರಡು ಆಂಬುಲೆನ್ಸ್‌ಗಳಿದ್ದು, ಇನ್ನೆರಡನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸಚಿವರಿಗೆ ಮನವಿ ಮಾಡಿದರು.

ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರು, ನಾಲ್ಕು ದಾದಿಯರು, ಇಬ್ಬರು ಸಿಬ್ಬಂದಿ ಕೊರೊನಾ ಸೋಂಕಿತರಾಗಿದ್ದಾರೆ. ಕೋವಿಡ್ ಸೆಂಟರ್‌ನಲ್ಲಿ 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಆಮ್ಲಜನಕ ಸಿಲಿಂಡರ್‌ಗಳ ದಾಸ್ತಾನು ಇದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ರವೀಂದ್ರ ಸಚಿವರಿಗೆ ಮಾಹಿತಿ ನೀಡಿದರು.

ಕೋವಿಡ್-19 ಸಂಬಂಧ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕೊಡಬೇಕು. ಕೋವಿಡ್ ಸಂದರ್ಭ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಸೇವೆಯನ್ನು ನಾವೆಲ್ಲಾ ಗೌರವಿಸುತ್ತೇವೆ. ಎಲ್ಲರೂ ಒತ್ತಡದಲ್ಲೇ ಕರ್ತವ್ಯ ನಿಭಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ನೇಮಕಕ್ಕೆ ಜಿಲ್ಲಾಧಿಕಾರಿ, ಡಿಎಚ್ಒ, ವೈದ್ಯಕೀಯ ಕಾಲೇಜಿನ ಡೀನ್‌ ಅವರಿಗೆ ಪೂರ್ಣ ಪ್ರಮಾಣದ ಅಧಿಕಾರ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಹೇಳಿದರು.

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಪಶ್ಚಿಮ ಘಟ್ಟ ರಕ್ಷಣೆ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಪೊಲೀಸ್ ವರೀಷ್ಠಾಧಿಕಾರಿ ಕ್ಷಮಾ ಮಿಶ್ರ, ತಹಶೀಲ್ದಾರ್ ಗೋವಿಂದರಾಜ್, ಟಿ.ಎಚ್.ಒ. ಶ್ರೀನಿವಾಸ್
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT