ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಶಾಲನಗರ | 'ಇತಿಹಾಸ ತಿಳಿಯದೆ ಸಾಧನೆ ಅಸಾಧ್ಯ’

ಕುಶಾಲನಗರ: ಏಕೀಕರಣದಲ್ಲಿ ಮಾಧ್ಯಮಗಳ ಪಾತ್ರ ಕುರಿತ ವಿಚಾರಗೋಷ್ಠಿ
Published : 13 ಆಗಸ್ಟ್ 2024, 4:16 IST
Last Updated : 13 ಆಗಸ್ಟ್ 2024, 4:16 IST
ಫಾಲೋ ಮಾಡಿ
Comments

ಕುಶಾಲನಗರ: ‘ಏಕೀಕರಣ ಬಗ್ಗೆ ಮಾಹಿತಿ ನೀಡಿ ಇತಿಹಾಸ ತಿಳಿಯದೆ ಸಾಧನೆ ಅಸಾಧ್ಯ’ಎಂದು ಜೆಎಸಿ ವಲಯ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ಅಭಿಪ್ರಾಯಪಟ್ಟರು.

ಕನ್ನಡ ಸಿರಿ ಸ್ನೇಹ ಬಳಗ ಮತ್ತು ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕೆಬಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ‘ಏಕೀಕರಣದಲ್ಲಿ ಮಾಧ್ಯಮಗಳ ಪಾತ್ರ’ ಕುರಿತ ವಿಚಾರಗೋಷ್ಟಿಯಲ್ಲಿ ಮಾತನಾಡಿ, ‘ಸಮಾಜದ ಬೆಳವಣಿಗೆ ಬಗ್ಗೆ ದಿನನಿತ್ಯ ವರದಿ ಮಾಡುವ ಪತ್ರಕರ್ತರ ಕೆಲಸ ಕಾರ್ಯ  ಶ್ಲಾಘನೀಯ’ ಎಂದರು.

ನಿವೃತ್ತ ಪ್ರಾಂಶುಪಾಲ ಡಾ.ಜೆ.ಎ.ಸೋಮಣ್ಣ ಮಾತನಾಡಿ, ‘ಕರ್ನಾಟಕ ಏಕೀಕರಣದಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳ ಪಾತ್ರ ಬಹುಮುಖ್ಯವಾದದ್ದು’ ಎಂದರು.

‘ಅಕ್ಷರ ಮತ್ತು ದೃಶ್ಯ ಮಾಧ್ಯಮಗಳು ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಸೇತುವೆಯಾಗಿದ್ದು ಜನರ ಬದುಕು ಹಸನಾಗಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಮೆಚ್ಚುಗೆಯ ವಿಷಯ’ ಎಂದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ‘ಮಾಧ್ಯಮ ಮತ್ತು ಇಂದಿನ ವಿದ್ಯಾರ್ಥಿಗಳು’ ಎಂಬ ವಿಷಯ ಮಂಡಿದರು. ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿದರು.

ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಂದ್ರ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್.ರುದ್ರಪ್ಪ, ಪತ್ರಕರ್ತರಾದ ವಿಘ್ನೇಶ್,ರಘು ಭಾಗವಹಿಸಿದ್ದರು. ವಿದ್ಯಾರ್ಥಿನಿ ತನ್ಸೀರಾ, ಉಪನ್ಯಾಸಕ ಮಂಜುನಾಥ್, ಎಚ್.ಎಸ್.ಅನಿತಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT