ಮಡಿಕೇರಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ‘ಗೃಹ ಆರೋಗ್ಯ ಕಾರ್ಯಕ್ರಮ’ವು ಜ.6ರಿಂದ ಕೊಡಗು ಜಿಲ್ಲೆಯಲ್ಲಿ ಜಾರಿಗೆ ಬರಲಿದೆ.

ಈ ಕುರಿತು ಶುಕ್ರವಾರ ಇಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿಗಳೊಂದಿಗೆ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ಈ ಯೋಜನೆ ಕುರಿತು ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್, ‘30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿಯಲ್ಲಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಿದೆ’ ಎಂದರು.

ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರನ್ನು ಒಳಗೊಂಡ 150 ತಂಡಗಳು ವಾರದಲ್ಲಿ 3 ದಿನ ಪ್ರತಿ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿ ಉಚಿತ ಔಷಧಿ ತಲುಪಿಸಲಾಗುತ್ತದೆ ಎಂದು ಹೇಳಿದರು.

ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ. ರಕ್ತದೊತ್ತಡ ಮಧುಮೇಹ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭ ಕೊರಳಿನ ಕ್ಯಾನ್ಸರ್ ಹೃದಯ ಸಂಬಂಧಿ ಕಾಯಿಲೆಗಳು, ನಿದ್ರಾಹೀನತೆ ಈ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಿದ್ದಾರೆ. ಕ್ಯಾನ್ಸರ್ ಚಿಹ್ನೆ ಲಕ್ಷಣಗಳು ಕಂಡುಬಂದಲ್ಲಿ ತಜ್ಞ ವೈದ್ಯರ ಮೂಲಕ ರೋಗ ನಿರ್ಣಯ ಖಚಿತಪಡಿಸಿ ಮುಂದಿನ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ‘ಭಾರತದಲ್ಲಿ ಉಂಟಾಗುತ್ತಿರುವ ಒಟ್ಟಾರೆ ಮರಣಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದಲೇ ಶೇ 61.8 ಮರಣಗಳು ಉಂಟಾಗುತ್ತಿವೆ. ಇದನ್ನು ತಡೆಗಟ್ಟಲು ಶೀಘ್ರ ಪತ್ತೆ ಮತ್ತು ತ್ವರಿತ ಚಿಕಿತ್ಸೆ ಮೂಲಕ ಪರಿಹಾರ ಕಂಡುಕೊಳ್ಳಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಧುಸೂದನ್, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಇಂದೂಧರ್, ಡಾ.ಚೇತನ್, ಡಾ.ಯತಿರಾಜ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಡಿಪಿಸಿ ಡಾ.ಶಾಂಭವಿ, ಡಿಪಿಎಂ ದೇವರಾಜು ಪಾಲ್ಗೊಂಡಿದ್ದರು.

ಅಸಾಂಕ್ರಾಮಿಕ ಕಾಯಿಲೆಗಳಿಂದಲೇ ಶೇ 61.8 ಮರಣಗಳು ಮರಣಗಳನ್ನು ತಡೆಯಲೆಂದೇ ಯೋಜನೆ ಜಾರಿ ಪ್ರತಿ ಮನೆಗೂ ಭೇಟಿ ನೀಡಲಿರುವ ತಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.