ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಟೋಟ ಸ್ಪರ್ಧೆ: ನೂರಾರು ಹಿರಿಯ ನಾಗರಿಕರು ಭಾಗಿ

ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಆಯೋಜನೆ
Published : 18 ಸೆಪ್ಟೆಂಬರ್ 2024, 7:33 IST
Last Updated : 18 ಸೆಪ್ಟೆಂಬರ್ 2024, 7:33 IST
ಫಾಲೋ ಮಾಡಿ
Comments

ಮಡಿಕೇರಿ: ಇಲ್ಲಿನ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ಹಿರಿಯ ನಾಗರಿಕರಿಗಾಗಿ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 200 ಮಂದಿ ಭಾಗವಹಿಸಿ, ಉಲ್ಲಾಸಿತರಾದರು.

ಅ. 1ರಂದು ನಡೆಯುವ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಇಲ್ಲಿ ನಡೆದ ವಿವಿಧ ಸ್ಪರ್ಧೆಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಉದ್ಘಾಟಿಸಿದರು.

ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‍ನಲ್ಲಿ ಬಾಲ್ ಎಸೆಯುವುದು ಈ ಮೂರು ವಿಭಾಗದಲ್ಲಿ ಆಟೋಟ ಸ್ಪರ್ಧೆಗಳು ನಡೆದವು. ಗಾಯನ ಸ್ಪರ್ಧೆ ಮತ್ತು ಏಕಪಾತ್ರಾಭಿನಯ ವಿಭಾಗದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನೆರವೇರಿದವು. 60-69 ಹಾಗೂ 70 ವರ್ಷ ತುಂಬಿದ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿತ್ತು.

ಭಾಗವಹಿಸಿದ್ದ ನೂರಾರು ಮಂದಿ ಹಿರಿಯ ನಾಗರಿಕರು ಈ ಸ್ಪರ್ಧೆಗಳನ್ನು ಸಂಭ್ರಮದಿಂದಲೇ ಭಾಗವಹಿಸಿದ್ದರು. ಪರಸ್ಪರ ಮಾತನಾಡಿ ಖುಷಿಪಟ್ಟರು. ದಿನವಿಡೀ ನಡೆದ ಅಪರೂಪದ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿದ್ದು ವಿಶೇಷ ಎನಿಸಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಶಂಕರಿ ಪೊನ್ನಪ್ಪ, ನಿವೃತ್ತ ನೌಕರರ ಸಂಘದ ಮಲ್ಲಪ್ಪ, ಮಾದಮಯ್ಯ, ತಿಮ್ಮಯ್ಯ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಭಾಗವಹಿಸಿದ್ದರು.

ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಇಲ್ಲಿ ಆಯ್ಕೆಯಾದವರು ಸೆ. 23ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಮಲಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT