ನಾಪೋಕ್ಲು: ಕಾವೇರಿ ಮನೆ ಕುಟುಂಬಸ್ಥರಿಂದ ಹುತ್ತರಿ ಕಪ್ ಕ್ರೀಡಾಕೂಟವನ್ನು ಡಿಸೆಂಬರ್ 14 ರಂದು ಭಾನುವಾರ ಬೆಳಿಗ್ಗೆ ಅಯ್ಯಂಗೇರಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ.

ಹುತ್ತರಿ ಕಪ್ ಕ್ರೀಡೆ ಅಂಗವಾಗಿ ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಹಾಗೂ ಮ್ಯಾರಾಥಾನ್ ಸ್ಪರ್ಧೆ ಆಯೋಜಿಸಲಾಗಿದೆ. ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹರಪಳ್ಳಿ ರವೀಂದ್ರ ಉದ್ಘಾಟಿಸುವರು. 0.22 ರೈಫಲ್ ಸ್ಪರ್ಧಾ ವಿಜೇತರಿಗೆ ಪ್ರಥಮ ಬಹುಮಾನ ₹10,000 ನಗದು ಮತ್ತು ಟ್ರೋಫಿ ದ್ವಿತೀಯ ಬಹುಮಾನ ₹7000 ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ ₹5,000 ರೂ.ನಗದು ಹಾಗೂ ಟ್ರೋಫಿ ವಿತರಿಸಲಾಗುವುದು. ಏರ್ ಗನ್ ವಿಭಾಗದಲ್ಲಿ ಪ್ರಥಮ ಬಹುಮಾನ ₹5000 ಮತ್ತು ಟ್ರೋಫಿ ದ್ವಿತೀಯ ಬಹುಮಾನ ₹3000 ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ ₹2000 ನಗದು ಹಾಗೂ ಟ್ರೋಫಿ ವಿತರಿಸಲಾಗುವುದು.

12 ರೈಫಲ್ (ಬೋರ್) ವಿಭಾಗದಲ್ಲಿ ಪ್ರಥಮ ಬಹುಮಾನ ₹10,000 ಮತ್ತು ಟ್ರೋಫಿ ದ್ವಿತೀಯ ಬಹುಮಾನ ₹7,000 ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ ₹5,000 ನಗದು ಹಾಗೂ ಟ್ರೋಫಿ ವಿತರಿಸಲಾಗುವುದು.

ಸಾರ್ವಜನಿಕರಿಗಾಗಿ ಆಯೋಜಿಸಲಾಗಿರುವ ಮುಕ್ತ ಮೆರಥಾನ್ ಸ್ಪರ್ಧೆಯನ್ನು ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ಉದ್ಘಾಟಿಸುವರು.ಅಂದು ಬೆಳಿಗ್ಗೆ 7.30 ಗಂಟೆಗೆ ಸಾರ್ವಜನಿಕರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಅಯ್ಯಂಗೇರಿ ಶಾಲಾ ಮೈದಾನದವರೆಗೆ 8 ಕಿ. ಮೀ ಅಂತರ ಹಾಗೂ 15 ವರ್ಷದ ಒಳಗಿನ ಮಕ್ಕಳಿಗೆ 5 ಕಿ. ಮೀ.ಅಂತರದ ಮೇರತಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಭರತ್ ಅವರ ಮೊ: 8431515404 ಸಂಪರ್ಕಿಸಲು ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.