ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಗರಿಗೆದರಿದ ಹುತ್ತರಿ ಸಂಭ್ರಮ

Published 27 ನವೆಂಬರ್ 2023, 16:34 IST
Last Updated 27 ನವೆಂಬರ್ 2023, 16:34 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುಗ್ಗಿ ಹಬ್ಬ ‘ಹುತ್ತರಿ’ಯನ್ನು ಸೋಮವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಕಕ್ಕಬ್ಬೆಯ ಪಾಡಿಇಗ್ಗುತ್ತಪ್ಪ ದೇವಾಲಯದಲ್ಲಿ ಕದಿರು (ಭತ್ತದ ತೆನೆ) ತೆಗೆದ ನಂತರ ಮಡಿಕೇರಿಯ ಓಂಕಾರೇಶ್ವರ ದೇಗುಲದಲ್ಲಿಯೂ ಕದಿರು ತೆಗೆಯಲಾಯಿತು. ಇದಕ್ಕೂ ಮುನ್ನ ದೇವಾಲಯದ ಕಲ್ಯಾಣಿಯಲ್ಲಿ ತೆಪ್ಪೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದವು.

ಈ ಮೂಲಕ ಸಂಭ್ರಮದ ಹಬ್ಬಕ್ಕೆ ಚಾಲನೆ ಸಿಕ್ಕಿತು. ಪಟಾಕಿಗಳ ಸಿಡಿತ, ಸಿಡಿಮದ್ದುಗಳ ಮೊರೆತಗಳ ನಡುವೆ ‘ಪೊಲಿ ಪೊಲಿಯೇ ದೇವಾ’ ಎಂಬ ಉದ್ಘೋಷಗಳು ಮುಗಿಲು ಮುಟ್ಟಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT