ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕುನಾಡಿನಲ್ಲಿ ಹುತ್ತರಿ ಸಂಭ್ರಮ

Published 28 ನವೆಂಬರ್ 2023, 15:01 IST
Last Updated 28 ನವೆಂಬರ್ 2023, 15:01 IST
ಅಕ್ಷರ ಗಾತ್ರ

ನಾಪೋಕ್ಲು: ಕೊಡಗಿನ ಸುಗ್ಗಿ ಹಬ್ಬವಾದ ಹುತ್ತರಿಯನ್ನು ಹೋಬಳಿಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಹುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಪೊಂಗೇರ, ಕಣಿಯಂಡ, ಕೋಳೆಯಂಡ, ಕಲಿಯಂಡ, ಐರೀರ, ಐಕೊಳಂಡ, ಬೊಳ್ಳಿನಮ್ಮಂಡ ಸೇರಿದಂತೆ ಅಮ್ಮಂಗೇರಿಯ ಹತ್ತು ಕುಟುಂಬದವರು ಪಾಲ್ಗೊಂಡಿದ್ದರು.

ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿಬೊಳಕ್ ಹಿಡಿದು ದೇವಾಲಯಕ್ಕೆ ಆಗಮಿಸಿದರು. ದುಡಿಕೊಟ್ ಪಾಟ್, ವಿಶೇಷ ಪ್ರಾರ್ಥನೆ, ಸಾಂಪ್ರದಾಯಿಕ ನೆರೆಕಟ್ಟುವ ಕಾರ್ಯದ ಬಳಿಕ ಅಮ್ಮಂಗೇರಿಯ ಜ್ಯೋತಿಷಿ ಕಣಿಯರ ಶಿವಕುಮಾರ್ ನಿರ್ಧರಿಸಿದಂತೆ ನಿಗದಿತ ಸಮಯದಲ್ಲಿ ಕುಶಾಲುತೋಪು ಹಾರಿಸಿ ಪೊಲಿಪೊಲಿ ಬಾ ಉದ್ಘೋಷಗಳನಡುವೆ ಕದಿರನ್ನು ಕಟಾವು ಮಾಡಲಾಯಿತು. ದೇವಾಲಯಕ್ಕೆ ಆಗಮಿಸಿದ ಭಕ್ತರುದೇವಾಲಯದ ಅಶ್ವತ್ಥಕಟ್ಟೆಗೆ ಪ್ರದಕ್ಷಿಣೆ ಬಂದುತೆನೆಗಳನ್ನು ನಮಸ್ಕಾರ ಮಂಟಪದಲ್ಲಿರಿಸಿ ವಿಶೇಷ ಲಕ್ಷ್ಮಿ ಪೂಜೆಯನ್ನು ನೆರವೇರಿಸಿದರು.

ಸಮೀಪದ ಹಳೆತಾಲ್ಲೂಕಿನ ಬೊಪ್ಪೆರ ಕಾವೇರಪ್ಪ ಅವರ ಮನೆಯಲ್ಲಿ ನಡೆದ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಂಡು ಸಂಭ್ರಮಿಸಿದರು. ಹುತ್ತರಿ ಹಬ್ಬವನ್ನು ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗತಪ್ಪ ದೇವಾಲಯದಲ್ಲಿ, ಶ್ರದ್ಧೆ ಹಾಗೂ ಭಕ್ತಿಪೂರ್ವಕವಾಗಿ ಸೋಮವಾರ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಸನ್ನಿಧಿಯಲ್ಲಿ ಸಂಪ್ರದಾಯದಂತೆ ಪೊಂಗೆರ, ಕನಿಯಂಡ, ಕೋಲೆಯಂಡ, ಬೊಳ್ಳನಮಂಡ ಮತ್ತು ಐರಿರ ಮನೆಯವರು ಹುತ್ತರಿ ಆಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಐದು ಮನೆತನದ ಕುಟುಂಬದ ಮಹಿಳೆಯರು ತಳಿಯಕ್ಕಿ ಬೊಳಕ್‌ನೊಂದಿಗೆ ಬಂದು ದೇವಾಲಯಕ್ಕೆ ಪ್ರದಕ್ಷಿಣೆಗೈದರು. ಹುತ್ತರಿ ಹಬ್ಬದ ಅಂಗವಾಗಿ ದೇವಾಲಯದಲ್ಲಿ ಪೊಂಗೇರ ಉಲ್ಲಾಸ್ ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪೊಲಿಪೊಲಿಯೇದೇವಾ ಎಂಬ ಉದ್ಘೋಷದೊಂದಿಗೆ ಕದಿರು ಕತ್ತರಿಸಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಪ್ರದಕ್ಷಿಣೆ ಬಂದು ಕದಿರನ್ನು ನಮಸ್ಕಾರ ಮಂಟಪದಲ್ಲಿಟ್ಟು ವಿಶೇಷ ಧಾನ್ಯಲಕ್ಷ್ಮಿ ಪೂಜೆ ನೆರವೇರಿಸಲಾಯ್ತು.ಅರ್ಚಕರಾದ ಕುಶ ಭಟ್,ಗುರುಪ್ರಸಾದ್ ಧಾನ್ಯಲಕ್ಷ್ಮಿಯ ಪೂಜೆ ನೆರವೇರಿಸಿದರು.

ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಸೋಮವಾರ ಹುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ನಿಗದಿತ ಸಮಯದಲ್ಲಿ ಕದಿರು ಕೊಯ್ದು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪೊಲಿಪೊಲಿ ದೇವಾ ಉದ್ಘೋಷಣೆಯೊಂದಿಗೆ ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಂಡರು. ಭಾಗಮಂಡಲದ ತಾವೂರು, ಚೇರಂಗಾಲ, ಕೋರಂಗಾಲ ಮತ್ತು ತಣ್ಣಿಮಾನಿ ಗ್ರಾಮಗಳಲ್ಲಿ ಹುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ರಾತ್ರಿಯಿಡೀ ಪಟಾಕಿಗಳ ಸದ್ದು ಮಾರ್ದನಿಸಿತು.

ನಾಪೋಕ್ಲು ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತಪ್ಪದೇವಾಲಯದಲ್ಲಿ  ಹುತ್ತರಿ  ಹಬ್ಬವನ್ನು ಶ್ರದ್ದಾಭಕ್ತಿಯಿಂದ  ಆಚರಿಸಲಾಯಿತು.
ನಾಪೋಕ್ಲು ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತಪ್ಪದೇವಾಲಯದಲ್ಲಿ  ಹುತ್ತರಿ  ಹಬ್ಬವನ್ನು ಶ್ರದ್ದಾಭಕ್ತಿಯಿಂದ  ಆಚರಿಸಲಾಯಿತು.
ನಾಪೋಕ್ಲು ಸಮೀಪದ ಹಳೆತಾಲೂಕಿನ ಬೊಪ್ಪೆರ ಕಾವೇರಪ್ಪ ಅವರ ಮನೆಯಲ್ಲಿ ನಡೆ ಆಚರಣೆಯಲ್ಲಿ  ಮುಸ್ಲಿಂ ಬಾಂಧವರು ಪಾಲ್ಗೊಂಡು ಸಂಭ್ರಮಿಸಿದರು.
ನಾಪೋಕ್ಲು ಸಮೀಪದ ಹಳೆತಾಲೂಕಿನ ಬೊಪ್ಪೆರ ಕಾವೇರಪ್ಪ ಅವರ ಮನೆಯಲ್ಲಿ ನಡೆ ಆಚರಣೆಯಲ್ಲಿ  ಮುಸ್ಲಿಂ ಬಾಂಧವರು ಪಾಲ್ಗೊಂಡು ಸಂಭ್ರಮಿಸಿದರು.
ನಾಪೋಕ್ಲು ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ  ತೆನೆಗಳನ್ನು  ನಮಸ್ಕಾರ ಮಂಟಪದಲ್ಲಿಟ್ಟು ವಿಶೇಷ ಧಾನ್ಯಲಕ್ಷ್ಮಿ ಪೂಜೆ ನೆರವೇರಿಸಲಾಯಿತು.
ನಾಪೋಕ್ಲು ಸಮೀಪದ ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ  ತೆನೆಗಳನ್ನು  ನಮಸ್ಕಾರ ಮಂಟಪದಲ್ಲಿಟ್ಟು ವಿಶೇಷ ಧಾನ್ಯಲಕ್ಷ್ಮಿ ಪೂಜೆ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT