ಮಡಿಕೇರಿ: ‘ಸಹಕಾರ ಹೊಸ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಇದು ಜಾರಿಗೆ ಬಂದರೆ ನ್ಯಾಯಾಲಯದಲ್ಲಿ ದಾವೆ ಹೂಡಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಶುಕ್ರವಾರ ತಿಳಿಸಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ‘ಉನ್ನತಿ’ ಭವನದ ಸಭಾಂಗಣದಲ್ಲಿ ‘ಸಹಕಾರ ಸಂಘಗಳ ಆಡಳಿತ ಪರಿಣಾಮಕಾರಿ ನಿರ್ವಹಣೆ’ ಸಂಬಂಧ ಒಂದು ವಾರ ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯ ಡಿಸಿಸಿ ಬ್ಯಾಂಕಿನ ನಿರಂತರ ಪ್ರಯತ್ನದಿಂದ ಸಹಕಾರ ಸಂಘಗಳಲ್ಲಿ ಷೇರಿನ ಮೊತ್ತವನ್ನು ಹೆಚ್ಚಿಸುವಲ್ಲಿ ಬೈಲಾ ತಿದ್ದುಪಡಿ ಮಾಡಲಾಗಿದೆ. ಇದು ಸಹಕಾರ ಸಂಘಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದರು.

ಸಹಕಾರ ವ್ಯವಸ್ಥೆಯಲ್ಲಿ ಕಲಿಕೆಯು ನಿರಂತರವಾಗಿದ್ದು, ಸಾಲದ ಪ್ರಕ್ರಿಯೆ ಮತ್ತು ಮಾರ್ಗಸೂಚಿಗಳು ಕಾಲ ಕಾಲಕ್ಕೆ ಬದಲಾಗುತ್ತಾ ಹೋಗುತ್ತವೆ. ಆದ್ದರಿಂದ ಸಹಕಾರ ಕಾಯ್ದೆ ಮತ್ತು ತಿದ್ದುಪಡಿ ಬಗ್ಗೆ ಮನನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಹಕಾರ ಕಾಯ್ದೆಗಳು, ಕಾನೂನುಗಳನ್ನು ತಿಳಿದುಕೊಂಡಲ್ಲಿ ಸಹಕಾರ ಸಂಘಗಳನ್ನು ಇನ್ನಷ್ಟು ಉತ್ತಮ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರಿಯಾಗಲಿದೆ. ಇದರಿಂದ ಕೃಷಿಕರಿಗೆ ಸಹಕಾರ ಸಂಘದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.

ಅಪೆಕ್ಸ್ ಬ್ಯಾಂಕಿನ ಕೃಷಿ ಸಹಕಾರಿ ಸಿಬ್ಬಂದಿ ತರಬೇತಿ ಸಂಸ್ಥೆಯ ಬೋಧಕ ಗುರುಸ್ವಾಮಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಅನ್ವಯವಾಗುವ ಸಹಕಾರ ಕಾಯ್ದೆ 1959 ಮತ್ತು ನಿಯಮಗಳು 1960 ಹಾಗೂ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಾದ ಇತ್ತೀಚಿನ ಬದಲಾವಣೆಗಳನ್ನು ಕುರಿತು ಮಾತನಾಡಿದರು.

ಬ್ಯಾಂಕಿನ ವೃತ್ತಿಪರ ನಿರ್ದೇಶಕರು ಹಾಗೂ ಶಾಸನ ಬದ್ಧ ಲೆಕ್ಕಪರಿಶೋಧಕರಾದ ಎ.ಗೋಪಾಲಕೃಷ್ಣ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಶಾಸನಬದ್ಧ ಲೆಕ್ಕ ಪರಿಶೋಧನೆಯಲ್ಲಿ ನಿರ್ದೇಶಕರ ಪಾತ್ರ ಹಾಗೂ ಜಿಎಸ್ಟಿ, ಟಿಡಿಎಸ್. ಆದಾಯ ತೆರಿಗೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ಕಡಂಗ ಸಹಕಾರ ಸಂಘದ ನಿರ್ದೇಶಕ ಕೆ.ಎಂ.ತಮ್ಮಯ್ಯ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸಹಕಾರಿಗಳ ಪಾತ್ರ ಕುರಿತು ಗಮನ ಸೆಳೆದರು.

ತರಬೇತಿಯಲ್ಲಿ ಪಾಲ್ಗೊಂಡಿದ್ದವರಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಲಾಯಿತು.

ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಪೂಳಂಡ ಪಿ.ಪೆಮ್ಮಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಡಿ.ರವಿಕುಮಾರ್, ಡಿಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕಿ ಭೋಜಮ್ಮ ಭಾಗವಹಿಸಿದ್ದರು.

ತರಬೇತಿಯಲ್ಲಿ 666 ಮಂದಿ ಭಾಗಿ

ಇಲ್ಲಿನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ‘ಉನ್ನತಿ’ ಭವನದ ಸಭಾಂಗಣದಲ್ಲಿ ಕಳೆದ 1 ವಾರದಿಂದ ಕಾಲ ನಡೆದ ‘ಸಹಕಾರ ಸಂಘಗಳ ಆಡಳಿತ ಪರಿಣಾಮಕಾರಿ ನಿರ್ವಹಣೆ’ ಕುರಿತ ತರಬೇತಿಯಲ್ಲಿ ಜಿಲ್ಲೆಯ 74 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು 518 ನಿರ್ದೇಶಕರು ಪಾಲ್ಗೊಂಡಿದ್ದರು. ಒಂದು ವಾರಗಳ ಕಾಲ ಇವರಿಗೆ ಸಹಕಾರ ಸಂಘಗಳ ಆಡಳಿತವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಹೇಗೆ ಎಂಬ ಕುರಿತು ವಿವಿಧ ವಿಷಯ ತಜ್ಞರು ತರಬೇತಿ ನೀಡಿದರು.

ಸಹಕಾರ ಕ್ಷೇತ್ರ: ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಕೊಡಗು ಸಹಕಾರ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರವಣ ಕುಮಾರ್ ಮಾತನಾಡಿ ‘ಸಹಕಾರ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನದಲ್ಲಿದ್ದು ಸದೃಢವಾಗಿದೆ’ ಎಂದರು. ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಹೊಸ ಹೊಸ ಕಲ್ಪನೆಗಳು ಆಧುನಿಕತೆಗೆ ಹೊಂದಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಾರಿಗೆ ತರಲು ಉದ್ದೇಶಿಸಿರುವ ಕಾಯ್ದೆ ಮರಣ ಶಾಸನ

’ ತೊರೆನೂರು ಸಹಕಾರ ಸಂಘದ ನಿರ್ದೇಶಕರಾದ ಕೃಷ್ಣೇಗೌಡ ಮಾತನಾಡಿ ‘ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ನೂತನವಾಗಿ ಜಾರಿಗೊಳಿಸಲು ಉದ್ದೇಶಿಸಿರುವ ಕಾಯ್ದೆಯು ಕೃಷಿಕರಿಗೆ ಮರಣ ಶಾಸನವಾಗಿದೆ’ ಎಂದು ಅಭಿಪ್ರಾಯಪಟ್ಟರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡಬೇಕು. ಯಾವುದೇ ಕಾರಣಕ್ಕೂ ಸಹಕಾರ ಸಂಘಗಳ ಮೇಲೆ ಗದಾಪ್ರಹಾರ ಮಾಡಬಾರದು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.