ಸುಂಟಿಕೊಪ್ಪ: ‘ಜೀವನವನ್ನು ಕ್ರೀಡಾಸ್ಫೂರ್ತಿಯಿಂದ ತೆಗೆದುಕೊಂಡಾಗ ಗೆಲುವು ಮತ್ತು ಸಾಧನೆ ನಮ್ಮದಾಗುತ್ತದೆ’ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.

ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಜಂಟಿ ಆಶ್ರಯದಲ್ಲಿ 14ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಯುವಜನತೆಗೆ ಸೋಲನ್ನು ಕಲಿಸಬೇಕು. ಗೆಲುವು ಸದಾಸಿಗುವ ವಸ್ತುವಲ್ಲ ಎಂಬ ನಿಲುವನ್ನು ಕಲಿಸಿಕೊಡಬೇಕು. ಸೋತು ಗೆಲ್ಲುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಅಥವಾ ನಗರ ಪ್ರದೇಶದಲ್ಲಿ ಕ್ರೀಡಾಕೂಟದ ಮೂಲಕ ಸಂಘಟಿತರಾಗಿ ಒಬ್ಬರಿಗೊಬ್ಬರು ಸಹಕರಿಸಿಕೊಳ್ಳುತ್ತಿರುವುದು ಒಳ್ಳೆಯ ಸಂಸ್ಕೃತಿ ಮತ್ತು ಬೆಳವಣಿಗೆ’ಎಂದು ಪ್ರಶಂಸಿದರು.

ಕ್ಷೇತ್ರದ ಶಾಸಕ ಡಾ.ಮಂತರ್ಗೌಡ ಅವರೊಂದಿಗೆ ಸೇರಿ ನಿಮ್ಮ ಬೇಡಿಕೆ ಈಡೇರಿಕೆ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪೊನ್ನಣ್ಣ ಭರವಸೆ ನೀಡಿದರು.

ಸಂತ ಅಂತೋಣಿ ದೇವಾಲಯದ ಧರ್ಮಗುರು ವಿಜಯಕುಮಾರ್ ಮಾತನಾಡಿ, ‘ಸಂಘಟನೆಯಲ್ಲಿ ಒಗ್ಗಟ್ಟಿದ್ದು ಸಮಾನ ಮನಸ್ಕರಾಗಿ ಕೆಲಸ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ’ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ವಹಿಸಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಿಲನ ಜೇಮ್ಸ್, ಡಾ. ಅನ್ಲಿಷಾ, ಜಾನ್ ಲೋಬೊ ಅವರನ್ನು ಸನ್ಮಾನಿಸಲಾಯಿತು. ಅಲ್ಲದೇ, ಅತಿ ಹೆಚ್ಚು ಅಂಕಗಳಿಸಿದ ಕ್ರೈಸ್ತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮೂರು ದಿನ ಸುಂಟಿಕೊಪ್ಪ ಜಿಯಂಪಿ ಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಜಿಲ್ಲೆಯ 22 ತಂಡ ಭಾಗವಹಿಸಿದ್ದವು. ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಪೊನ್ನಂಪೇಟೆ ತಂಡ ಸೋಮವಾರಪೇಟೆ ಗೋಪಾಲಾಪುರ ತಂಡವನ್ನು ಸೋಲಿಸುವ ಮೂಲಕ ರೋಮನ್ ಕ್ಯಾಥೋಲಿಕ್ ಕಪ್ ಗೆದ್ದುಕೊಂಡರೆ, ತೃತೀಯ ಸ್ಥಾನವನ್ನು ಸಿದ್ಧಾಪುರ ಸೈಂಟ್ ಪೊರೆನ್ಸ್ ದೇವಾಲಯ ತಂಡ, ನಾಲ್ಕನೇ ಬಹುಮಾನ ಆಮ್ಮತ್ತಿ ಸಂತ ಅಂತೋಣಿ ದೇವಾಲಯದ ಎ. ತಂಡ ಪಡೆದುಕೊಂಡವು.

ಮಹಿಳೆಯರಿಗಾಗಿ ಏರ್ಪಡಿಸಿದ್ದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಜಿಲ್ಲೆಯ ಒಟ್ಟು 10 ತಂಡಗಳು ಭಾಗವಹಿಸಿದ್ದು, ಅಬ್ಬೂರುಕಟ್ಟೆಯ ಸೈಂಟ್ ಲಾರೆನ್ಸ್ ತಂಡವು ಮಡಿಕೇರಿ ಸಂತ ಮೈಕಲರ ತಂಡವನ್ನು ಸೋಲಿಸಿ ಪ್ರಥಮಸ್ಥಾನ ಪಡೆಯಿತು.

ಪುರುಷರ ಹಗ್ಗಜಗ್ಗಾಟದಲ್ಲಿ ಅಬ್ಬೂರಕಟ್ಟೆ ತಂಡ ಪೊನ್ನಂಪೇಟೆ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಹೆಗ್ಗಳ ಸೆಂಟ್ ಜಾನ್ ತಂಡ ಪ್ರಥಮ ಸ್ಥಾನ ಮಡಿಕೇರಿ ಸಂತ ಮೈಕಲರ ತಂಡ ದ್ವಿತೀಯ ಸ್ಥಾನ ಪಡೆಯಿತು.

ವೇದಿಕೆಯಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ರೇ.ಫಾ. ಜೇಮ್ಸ್ ಡಾಮಿನಿಕ್, ಆಮ್ಮತ್ತಿ ದೇವಾಲಯದ ಧರ್ಮಗುರು ಮದಲೈಮುತ್ತು, ಚೆಟ್ಟಳ್ಳಿ ಸಂತ ಸೆಬಾಸ್ಟಿನ್ ಧರ್ಮಗುರು ರೇ.ಫಾ.ಜೆರಾಲ್ಡ್ ಸಿಕ್ವೇರಾ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೋವಿಟಾ ವಾಜ್, ಪಿ.ಎಂ.ಲತೀಫ್, ಹಿಂದುಳಿದ ಅಲ್ಪಸಂಖ್ಯಾತ ವರ್ಗಗಳ ರಾಜ್ಯ ಉಪಾಧ್ಯಕ್ಷ ಟಿ.ಕೆ.ಸಾಯಿಕುಮಾರ್, ಗ್ರಾಮ ಪಂಚಾಯುತಿ ಸದಸ್ಯ ಜಿನಾಸುದ್ದೀನ್, ಪ್ರಗತಿ ಪರ ಕೃಷಿಕ ಎಂ.ಟಿ.ಬೇಬಿ, ದೇವಾಲಯದ ಕ್ರೀಡಾ ಆರ್ಥಿಕ ಸಮಿತಿ ಅಧ್ಯಕ್ಷ ಪಿ.ಎಂ.ಬಿಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಕೀಂ, ಸುಂಟಿಕೊಪ್ಪ ಸ.ಮಾ.ಪ್ರಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಯು.ರಫೀಕ್ಖಾನ್, ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಜೋಕಿಂ ವಾಝ್, ಜೋಕಿಂ ರಾಡ್ರಿಗಸ್, ಯೇಸುದಾಸ್, ಕಾರ್ಯದರ್ಶಿ ಜೂಡಿವಾಡಿ, ಖಜಾಂಚಿ ಜೇಮ್ಸ್ ‘ಡಿ’ಸೋಜಾ, ಮಹಿಳಾ ಘಟಕದ ಅಧ್ಯಕ್ಷೆ ಫಿಲೋಮಿನಾ, ಮಹಿಳಾ ಘಟಕಗಳ ಸದಸ್ಯರಾದ ರೋಸ್ಮೇರಿ ರಾಡ್ರಿಗಸ್, ಗ್ರೇಸಿ ಡೇವಿಡ್, ಗೌರವ ಸಲಹೆಗಾರರಾದ ಎಸ್.ಎಂ.ಡಿಸಿಲ್ವ, ರ್ವಿನ್ ಲೋಬೋ, ಆಗಸ್ಟಿನ್ ಜಯರಾಜ್, ಅಂತೋಣಿ ಡಿ’ಸೋಜಾ, ಪಿ.ಎಫ್.ಸಬಾಸ್ಟೀನ್, ಡೆನ್ನಿ ಬರೋಸ್, ಪಿಲಿಫ್ ವಾಸ್, ಯುವಘಟಕದ ಅಧ್ಯಕ್ಷ ಬಬುಲು, ರೋನಾಲ್ಡ್ ರಾಡ್ರಿಗಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.