ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮರ್ಪಕ ನೀರು ಪೂರೈಕೆ: ಪ್ರತಿಭಟನೆ

Published 8 ಏಪ್ರಿಲ್ 2024, 5:24 IST
Last Updated 8 ಏಪ್ರಿಲ್ 2024, 5:24 IST
ಅಕ್ಷರ ಗಾತ್ರ

ಕುಶಾಲನಗರ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಅಸಮರ್ಪಕ ಕುಡಿಯುವ ನೀರು ಪೂರೈಕೆ ವಿರುದ್ಧ ಭಾನುವಾರ ಪ್ರತಿಭಟನೆ ನಡೆಸಿದರು. 

ಈ ಹಿನ್ನೆಲೆಯಲ್ಲಿ ಗುಡ್ಡೆಹೊಸೂರು ಗ್ರಾಮ ಪಂಚಾಯತಿಯಿಂದ ಕಳೆದ ಮೂರು ತಿಂಗಳಿಂದ ಜನರಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಇದೀಗ ತಾಲ್ಲೂಕು ಆಡಳಿತದಿಂದ ಕಳೆದ ಒಂದು ವಾರದಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದೆ. ಆದರೆ, ಮೂರು ದಿನಗಳಿಗೊಮ್ಮೆ ಕೆಲವು ದಿನ‌ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಯಿತು. ಆದರೆ ಜನರ ಅಗತ್ಯತೆಗೆ ಬೇಕಾದ ನೀರು ಪೂರೈಸುತ್ತಿಲ್ಲ. ಇದರಿಂದ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ತುಂಬ ತೊಂದರೆ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಟಾಸ್ಕ್ ಫೋರ್ಸ್ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿ ಖಾಲಿ ಕೊಡ ಪ್ರದರ್ಶನ ಮಾಡಿದರು. ಈ ಸಂದರ್ಭ ಗ್ರಾಮದ ಮುಖಂಡರು ಹಾಗೂ ಮಹಿಳೆಯರು ‌ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT