ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿರಿಜನ ಹಾಡಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ

Published 19 ಮಾರ್ಚ್ 2024, 3:08 IST
Last Updated 19 ಮಾರ್ಚ್ 2024, 3:08 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ತಿತಿಮತಿ ಬಳಿಯ ಮರಪಾಲ, ಆಯಿರ ಸುಳಿ, ಜಂಗಲ್ ಹಾಡಿಯ ನೂತನ ಅಂಗನವಾಡಿ ಕೇಂದ್ರಗಳನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ನಾಗರಹೊಳೆ ಅರಣ್ಯದೊಳಗಿನ ಹಾಡಿಗಳಲ್ಲಿ ಅಂಗನವಾಡಿ ಕೇಂದ್ರಗಳು ಪ್ಲಾಸ್ಟಿಕ್ ಗುಡಿಸಲುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಾಡಿಗಳಲ್ಲಿ ನೂತನವಾಗಿ ಕೇಂದ್ರಗಳ ಕಟ್ಟಡವನ್ನು ನಿರ್ಮಾಣ ಮಾಡಲಾಗಿತ್ತು. ಇದನ್ನು ಶಾಸಕ ಪೊನ್ನಣ್ಣ ಉದ್ಘಾಟಿಸಿ ಪುಟಾಣಿಗಳ ಆಟ, ಓಟ ಮತ್ತು ಅಕ್ಷರ ಕಲಿಕೆಗೆ ಅವಕಾಶ ಮಾಡಿಕೊಟ್ಟಿದ್ದರು.

ಅಂಗನವಾಡಿ ಕೇಂದ್ರ ಹಾಡಿ ಮಕ್ಕಳನ್ನು ಶಾಸಕ ಎ.ಎಸ್.ಪೊನಣ್ಣ ಎತ್ತಿಕೊಂಡು ಉದ್ಘಾಟನಾ ಕಾರ್ಯ ನೆರವೇರಿಸಿದರು. ಮುಖಂಡರಾದ ಪಿ.ಆರ್.ಪಂಕಜಾ, ಟಾಟು ಮೊಣ್ಣಪ್ಪ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT