ಸೋಮವಾರಪೇಟೆ: ನಮ್ಮ ಜೀವನದಲ್ಲಿ ಆಸ್ತಿಗಿಂತಲೂ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತಿದ್ದು, ಎಲ್ಲರೂ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿ ಉನ್ನತ ಶಿಕ್ಷಣ ಪಡೆಯಬೇಕೆಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.

ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಭಾನುವಾರ ನೂತನ ಕೊಠಡಿಗಳನ್ನು ಉದ್ಘಾಟಿಸಿ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯೆ ಎಂಬುದೇ ಅಪೂರ್ವ ಸಂಪತ್ತು. ವಿದ್ಯಾದಾನ ಮಹಾನ್ ಕಾರ್ಯ. ಸಾಕಷ್ಟು ವಿಷಯಗಳಲ್ಲಿ ಶಿಕ್ಷಣ ಪಡೆಯಲು ಅವಕಾಶ ಇದ್ದರೂ, ಎಲ್ಲದರಲ್ಲೂ ತೀವ್ರ ಸ್ಪರ್ಧೆಗಳಿದ್ದು, ಮಕ್ಕಳು ಓದಲೇಬೇಕು. ವಿದ್ಯೆಯೇ ನಮ್ಮನ್ನು ಉನ್ನತ ಸ್ಥಾನಕ್ಕೆ ತಲುಪಿಸುತ್ತದೆ. ಕಲಿತ ವಿದ್ಯೆಯನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗಳು ಗ್ರಾಮೀಣ ವಿದ್ಯಾರ್ಥಿಗಳಿಂದ ಆಗುತ್ತಿರುವುದು ಸಂತೋಷದ ವಿಷಯ. ಮಕ್ಕಳ ಕಲಿಕೆಗೆ ಪೋಷಕರು, ಶಿಕ್ಷಕರು ಪ್ರೋತ್ಸಾಹ ನೀಡುವುದು ಅವರ ಜವಾಬ್ದಾರಿಯಾಗಿದೆ. ಓದು ಮುಂದುವರಿಸಲು ಕಷ್ಟವಾದ ಕುಟುಂಬಗಳು ಹಿಂಜರಿಕೆಯಿಲ್ಲದೆ ಸಹಾಯ ಕೇಳಬೇಕು. ಸಾಕಷ್ಟು ಸಂಘ-ಸಂಸ್ಥೆಗಳು, ದಾನಿಗಳು ಕೂಡ ಶಿಕ್ಷಣ ಮುಂದುವರಿಸಲು ಅವಶ್ಯಕತೆ ಇದ್ದವರಿಗೆ ಸಹಾಯ ಮಾಡುತ್ತಿವೆ. ತಾಲ್ಲೂಕು ಒಕ್ಕಲಿಗರ ಸಂಘದವರು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹೆಸರಿನಲ್ಲಿ ಆಂಗ್ಲಮಾಧ್ಯಮದಲ್ಲಿ ಶಾಲಾ, ಕಾಲೇಜು ತೆರೆದು, ವಿದ್ಯಾದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ನಮ್ಮ ಸಂಸ್ಥೆಯಿಂದ 2005ರಲ್ಲಿ ವಿದ್ಯಾಸಂಸ್ಥೆ ಪ್ರಾರಂಭಿಸಿ, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಳೆದ 9 ವರ್ಷಗಳಿಂದ ಪ್ರತಿ ವರ್ಷ ಎಸ್ಎಸ್ಎಲ್ಸಿಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆಯಲಾಗಿದೆ. ಪ್ರಸಕ್ತ ವರ್ಷ ಜಿಲ್ಲಾ ಮಟ್ಟದಲ್ಲಿ ಮೂರು ರ್ಯಾಂಕ್ಗಳು ನಮ್ಮ ಕುವೆಂಪು ವಿದ್ಯಾಸಂಸ್ಥೆಗೆ ಸಿಕ್ಕಿದೆ. ಪಿಯುಸಿ ವಿಭಾಗದ ವಿಜ್ಞಾನ ವಿಭಾಗದಲ್ಲೂ ಶೇ100ರಷ್ಟು ಫಲಿತಾಂಶ ಸಿಕ್ಕಿದೆ. ಈಗಾಗಲೇ ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸಿಬಿಎಸ್ಸಿ ಯಲ್ಲಿ ಶಿಕ್ಷಣ ಪ್ರಾರಂಭಿಸಿದ್ದು, ಮುಂದಿನ ಸಾಲಿನಿಂದ ಪೂರ್ಣ ಪ್ರಮಾಣದಲ್ಲಿ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಿ.ಎಸ್.ಆದ್ವಿ, ಕೆ.ಸಿ. ಪಂಚಮಿ, ಕೆ.ಎಸ್. ತೇಜಸ್ವಿನಿ ಹಾಗೂ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಮಹಮ್ಮದ್ ಇರ್ಮಾನ್, ಎಸ್.ವೈ. ಹಿಮಾನಿ, ವೈ.ಎಸ್.ಧನ್ಯ, ವಾಣಿಜ್ಯ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಕೆ.ಎಂ. ಸೃಷ್ಟಿ, ಎಂ.ಡಿ. ಖುಷಿ, ಡಿ.ಎಸ್. ಸ್ನೇಹ ಅವರನ್ನು ಅಭಿನಂದಿಸಲಾಯಿತು. ದಾನಿಗಳನ್ನು ಸನ್ಮಾನಿಸಲಾಯಿತು.

ಬೆಂಗಳೂರಿನ ಉದ್ಯಮಿಗಳಾದ ಕೆ.ಟಿ. ಬೆಳ್ಳಿಗೌಡ, ಮಂಜೂರು ತಮ್ಮಣಿ, ಸಂಘದ ಉಪಾಧ್ಯಕ್ಷ ಎಸ್.ಬಿ. ಭರತ್ ಕುಮಾರ್, ಕಾರ್ಯದರ್ಶಿ ಎನ್.ಬಿ. ಗಣಪತಿ, ಖಜಾಂಚಿ ಜಿ.ಪಿ. ಲಿಂಗರಾಜು, ವಿದ್ಯಾಸಂಸ್ಥೆಯದ ಕೆ.ಎಂ. ಜಗದೀಶ್, ಸಮುದಾಯಭವನ ಉಸ್ತುವಾರಿ ಕೆ.ಟಿ.ಪರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮತ್ತು ಸಂಘದ ನಿರ್ದೇಶಕರು, ವಿಶೇಷ ಆಹ್ವಾನಿತರಾದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಿಕಾ ಕುಮಾರ್, ನಗರ ಗೌಡ ಒಕ್ಕೂಟದ ಅಧ್ಯಕ್ಷ ಎಂ.ಎಂ. ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.