ಮಡಿಕೇರಿ: ಆರ್‌ಎಸ್‌ಎಸ್‌ನ ಕೊಡಗು ಜಿಲ್ಲಾ ಕಾರ್ಯಾಲಯ ‘ಮಧುಕೃಪಾ’ದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಗುರುವಾರ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಕಾರ್ಯವಾಹ ರವಿ ಕುಶಾಲಪ್ಪ, ‘ಶತಾಬ್ದಿಯ ಹೊಸ್ತಿಲಲ್ಲಿ ಆರ್‌ಎಸ್‌ಎಸ್ ಇದ್ದು, ‘ಸಾಮಾಜಿಕ ಪರಿವರ್ತನೆಗಾಗಿ ಪಂಚಕಾರ್ಯಗಳು’ ಎಂಬ ಅಭಿಯಾನವನ್ನು ಕೈಗೊಂಡಿದೆ’ ಎಂದರು.

ಪರಿಸರ ಸಂರಕ್ಷಣೆ, ಕುಟುಂಬ ಪ್ರಬೋಧನ್, ಸಾಮಾಜಿಕ ಸಾಮರಸ್ಯ, ಸ್ವದೇಶಿ ಜೀವನಶೈಲಿ, ನಾಗರಿಕ ಶಿಷ್ಟಾಚಾರದ ಮೂಲಕ ಸದೃಢ ಸಮಾಜವನ್ನು ನಿರ್ಮಿಸುವ ಕಾರ್ಯ ನಿರಂತರವಾಗಿ ಆಗುತ್ತಿದೆ. ಇಡೀ ಸಮಾಜವನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಸದೃಢ ಸಮಾಜವನ್ನು ನಿರ್ಮಿಸುವ ಸಂಘದ ಧ್ಯೇಯದಂತೆ ಪ್ರಯತ್ನಗಳಾಗುತ್ತಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಭಾಗ ಪ್ರಚಾರಕರು, ಜಿಲ್ಲಾ ಪ್ರಚಾರಕರು, ಕಾರ್ಯಕರ್ತರು ಹಾಗೂ ಸ್ವಯಂ ಸೇವಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.