ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಜಪೇಟೆ: ಯೋಧ ಅಲ್ತಾಫ್‌ ಅಹಮ್ಮದ್‌ ಅಂತ್ಯಕ್ರಿಯೆ

ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾಗಿದ್ದ ಅಲ್ತಾಫ್‌ ಅಹಮ್ಮದ್‌
Last Updated 26 ಫೆಬ್ರುವರಿ 2022, 9:19 IST
ಅಕ್ಷರ ಗಾತ್ರ

ವಿರಾಜಪೇಟೆ (ಕೊಡಗು): ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ವಿರಾಜಪೇಟೆಯ ಯೋಧ ಅಲ್ತಾಫ್ ಅಹಮ್ಮದ್‌ (37) ಅವರ ಅಂತ್ಯಕ್ರಿಯೆಯು ಸಕಲ ಗೌರವದೊಂದಿಗೆ ಶನಿವಾರ ನೆರವೇರಿತು.

ಶನಿವಾರ ಬೆಳಿಗ್ಗೆ ವಿರಾಜಪೇಟೆಗೆ ಪಾರ್ಥಿವ ಶರೀರವು ತಲುಪಿತು. ತಾಲ್ಲೂಕು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಗಣ್ಯರು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.

ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಯ್ಯಪ್ಪ ಅವರು ದರ್ಶನ ಪಡೆದು ಗೌರವ ಸಲ್ಲಿಸಿದರು.

ಶ್ರೀನಗರ ಭಾಗದಲ್ಲಿ ಬುಧವಾರ ಬೆಳಿಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಿಮಪಾತದಿಂದ ಹುತಾತ್ಮರಾಗಿದ್ದರು.

ಅಲ್ತಾಫ್ ಅಹಮ್ಮದ್‌ ಅವರು ಪಟ್ಟಣದ ಸೇಂಟ್‌ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿದ್ದರು. ಬಳಿಕ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದಿದ್ದರು. ಬಳಿಕ, ಸೇನಾ ನೇಮಕಾತಿ ರ್‍ಯಾಲಿಯಲ್ಲಿ ಪಾಲ್ಗೊಂಡು ಭಾರತೀಯ ಸೇನೆಗೆ ಆಯ್ಕೆಗೊಂಡಿದ್ದರು.

ಮೀನುಪೇಟೆಯಲ್ಲಿ ವಾಸವಾಗಿದ್ದ ದಿ.ಉಮ್ಮರ್ ಮತ್ತು ಆಶೀಯಾ ದಂಪತಿ ಪುತ್ರ ಅಲ್ತಾಫ್ ಅಹಮ್ಮದ್‌. ಅಲ್ತಾಫ್ ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತಿಮ ದರ್ಶನದ ವೇಳೆ ಕುಟುಂಬಸ್ಥರು ಭಾವುಕರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT