ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

International Yoga Day | ಮಡಿಕೇರಿ: ಯೋಗ ದಿನಾಚರಣೆಯಲ್ಲಿ ನೂರಾರು ಮಂದಿ ಭಾಗಿ

Published 21 ಜೂನ್ 2024, 1:45 IST
Last Updated 21 ಜೂನ್ 2024, 1:45 IST
ಅಕ್ಷರ ಗಾತ್ರ

ಮಡಿಕೇರಿ: ನಗರದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದರು.

ಇಲ್ಲಿನ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ನಗರಸಭರ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾ ಆಯುಷ್ ಅಧಿಕಾರಿ ರೇಣುಕಾದೇವಿ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಭಾಗಿಯಾದರು.

ಹಿರಿಯ ಯೋಗ ತರಬೇತುದಾರ ಮಹೇಶ್ ಯೋಗಾಭ್ಯಾಸದ ಮಾರ್ಗದರ್ಶನ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರ ಇಲಾಖೆ, ಸಮಾಜ ಕಲ್ಯಾಣ, ಪದವಿಪೂರ್ವ ಶಿಕ್ಷಣ ಇಲಾಖೆ, ಎನ್‌ಎಸ್‌ಎಸ್‌, ಎನ್‌ಸಿಸಿ ಘಟಕಗಳು, ನೆಹರೂ ಯುವ ಕೇಂದ್ರ, ಇಂಡಿಯನ್ ರೆಡ್‌ಕ್ರಾಸ್‌ ಸೊಸೈಟಿ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಕೇಂದ್ರ, ಎನ್‌ಐಎಂಎ, ಆರ್ಟ್‌ ಆಫ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟನೆಗಳು ಸಹಕಾರ ನೀಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT