ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದರ್ಶನ್ ಅವರನ್ನು ಇನ್ನಷ್ಟು ತೀವ್ರ ವಿಚಾರಣೆಗೆ ಒಳಪಡಿಸಿ: ಅಪ್ಪಚ್ಚುರಂಜನ್ ಒತ್ತಾಯ

Published 17 ಜೂನ್ 2024, 10:19 IST
Last Updated 17 ಜೂನ್ 2024, 10:19 IST
ಅಕ್ಷರ ಗಾತ್ರ

ಮಡಿಕೇರಿ: ನಟ ದರ್ಶನ್ ಬೇರೆ ಕೊಲೆಗಳನ್ನು ಮಾಡಿರಬಹುದೇ ಎಂಬ ಕುರಿತು ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಬಿಜೆಪಿ ಮುಖಂಡ ಎಂ.ಪಿ.ಅಪ್ಪಚ್ಚುರಂಜನ್ ಒತ್ತಾಯಿಸಿದರು.

ಅವರು ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

'ನಾನು ಹೆಸರಿಡಿದೇ ಹೇಳುತ್ತೇನೆ. ಈ ದರ್ಶನ್ ಒಬ್ಬ ದುರಂಹಕಾರದ ವ್ಯಕ್ತಿ. ಅಲ್ಪನಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರು ಎಂಬಂತೆ ದರ್ಶನ್ ಇದ್ದರು. ಅವರ ಮ್ಯಾನೇಜರ್ ನಾಪತ್ತೆ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಕೃತ್ಯಗಳು ಹೆಚ್ಚಾಗಿವೆ‌. ಕೂಡಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಸೈಕಲ್ ನಲ್ಲಿ ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಂದು ಇಂಧನ ಬೆಲೆ ಏರಿಕೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT