ಕೊಪ್ಪಳ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು http://sevasindhu.karnataka. gov.in ಮೂಲಕ ಜು. 4ರ ಒಳಗೆ ಅರ್ಜಿ ಸಲ್ಲಿಸಬೇಕು. ಹಿಂದಿನ ಎರಡು ವರ್ಷ ಅರ್ಜಿ ಸಲ್ಲಿಸಿರುವವರು ಮರಳಿ ಅರ್ಜಿ ಸಲ್ಲಿಸಬಾರದು. ನಿಗಮದ ವೆಬ್ಸೈಟ್ https://ambigaradevelopment. karnataka.gov.in ಅಥವಾ ನಿಗಮದ ಸಹಾಯವಾಣಿ 080-22864099, 08539-221847 ಸಂಪರ್ಕಿಸಿ.

ಕಾಡುಗೊಲ್ಲ ನಿಗಮದಿಂದ ಅರ್ಜಿ ಆಹ್ವಾನ

ಕೊಪ್ಪಳ: ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನ ಮಾಡುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಜು. 2 ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿಗೆ ನಿಗಮದ ಕೇಂದ್ರ ಕಚೇರಿ 080-2374848/7899899039 ಅಥವಾ 08539-221847 ಸಂಪರ್ಕಿಸಿ.

ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕೊಪ್ಪಳ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ ನೀಡಲು ಆರೈಕೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿದಾರರು ಯು.ಡಿ.ಐ.ಡಿ. ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಸೇರಿದಂತೆ ಇತರ ದಾಖಲೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂಗಳನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.