ಕುಶಾಲನಗರ: ಎರಡು ವರ್ಷಗಳ ಹಿಂದೆ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ ಆರಂಭಗೊಂಡ ಕೊಡಗು ವಿಶ್ವವಿದ್ಯಾನಿಲಯವನ್ನು ಉಳಿಸುವ ನಿಟ್ಟಿನಲ್ಲಿ 28ರಂದು ಶುಕ್ರವಾರ ಅಳುವಾರದಿಂದ ಕುಶಾಲನಗರದ ವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ವಿವಿ ಸೇರಿದಂತೆ 9 ವಿವಿ ಮುಚ್ಚಲು ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ಹಮ್ಮಿಕೊಂಡಿದ್ದು, 16 ಕಿ.ಮೀ. ಪಾದಯಾತ್ರೆ ನಡೆಸಲಿದ್ದಾರೆ. ಈ ಹೋರಾಟಕ್ಕೆ ಬಿಜೆಪಿಯಿಂದ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಜಾಥಾದಲ್ಲಿ ಸಂಸದ ಯದುವೀರ್ ಒಡೆಯರ್, ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ , ನೂರಾರು ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಲಿದ್ದಾರೆ ಎಂದರು.

ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಗೆ ಜಾಥಾ ಆರಂಭವಾಗಲಿದೆ. ಕುಶಾಲನಗರದಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು.

20 ವರ್ಷಗಳ ಸತತ ಪ್ರಯತ್ನದಿಂದ ಕೊಡಗು ವಿವಿ ರಚನೆಗೊಂಡಿದೆ. ಅಂದು ಮಂಗಳೂರು ವಿವಿಯಲ್ಲಿ ರಿಜಿಸ್ಟ್ರಾರ್ ಆಗಿದ್ದ ಕಾವೇರಪ್ಪ ಸ್ನಾತಕೋತ್ತರ ಕೇಂದ್ರ ಆರಂಭಿಸಲು ಸಹಕಾರ ನೀಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭ ಮಂಗಳೂರು ವಿವಿ ವತಿಯಿಂದ ಅಳುವಾರದಲ್ಲಿ ಸ್ನಾತಕೋತ್ತರ ಕೇಂದ್ರ ತೆರೆಯಲಾಯಿತು. ನೂತನ ಸ್ನಾತಕೋತ್ತರ ಕೇಂದ್ರವನ್ನು ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡಗು ವಿವಿ ಸ್ಥಾಪಿಸಲಾಗಿತ್ತು ಎಂದು ವಿವರಿಸಿದರು.

ಸ್ನಾತಕೋತ್ತರ ಕೇಂದ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಕೊಡಗು ವಿವಿಯಲ್ಲಿ 450 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಐದಾರು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೊಡಗಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೊಡಗು ವಿವಿ ಮುಂದುವರಿಸಬೇಕು. ಸಚಿವ ದಿನೇಶ್ ಗುಂಡೂರಾವ್ ಅವರಲ್ಲೂ ಮನವಿ ಮಾಡಿದ್ದೇವೆ. ಜಿಲ್ಲೆಯ ಶಾಸಕರು ಕೂಡ ಸರ್ಕಾರದ ಮೇಲೆ ಒತ್ತಡ ತಂದು ಕೊಡಗು ವಿವಿ ಉಳಿಸಬೇಕು ಎಂದು ಒತ್ತಾಯಿಸಿದರು.

ನಾನು ಶಾಸಕನಾಗಿದ್ದ ಸಂದರ್ಭ ಕುಶಾಲನಗರ, ಪೊನ್ನಂಪೇಟೆ ತಾಲ್ಲೂಕು ರಚನೆಯಲ್ಲಿ ವಿಶೇಷ ಪ್ರಯತ್ನ ಮಾಡಿ ನೂತನ ತಾಲ್ಲೂಕು ರಚನೆಗೆ ಕಾರಣರಾಗಿದ್ದೇನೆ ಎಂದರು.ಕೊಡಗು ವಿವಿ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಯಿಂದಲೂ ವಿವಿಧ ರೀತಿಯ ಹೋರಾಟ ನಡೆಸುತ್ತೇವೆ ಎಂದರು.
ಸೋಮವಾರಪೇಟೆ ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್, ಉಪಾಧ್ಯಕ್ಷ ಅಜೀಜ್ ಕುಮಾರ್ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಮುಖಂಡ ವೈಶಾಖ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.