ಮಡಿಕೇರಿ: ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಕೆ.ಎಂ.ಗಣೇಶ್ ಅವರು ಜೂನ್ 4ರಂದು ಜಂಬೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಮದೆ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸಂತ್ರಸ್ತರ ಮನೆಗಳ ಗುಣಮಟ್ಟವನ್ನು ಪರಿಶೀಲಿಸಿದ ಅವರು, ‘ಜಂಬೂರು ಗ್ರಾಮದ ಮನೆಗಳ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ’ ಎಂದು ಆರೋಪಿಸಿದರು.

2018ರಲ್ಲಿ ಕೊಡಗಿನಲ್ಲಿ ಸಂಭವಿಸಿದ್ದ ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಂಡ 800ಕ್ಕೂ ಹೆಚ್ಚು ಕುಟುಂಬಗಳಿಗೆ ತಕ್ಷಣ ಸ್ಪಂದಿಸಿದ್ದ ಕುಮಾರಸ್ವಾಮಿ ಅವರ ಪ್ರಯತ್ನದಿಂದಲೇ ಈಗ ನೂತನ ಮನೆಗಳು ನಿರ್ಮಾಣಗೊಂಡಿವೆ. ಕನಿಷ್ಠ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸುವ ಔದಾರ್ಯವನ್ನು ಕೂಡ ಆಡಳಿತ ನಡೆಸುತ್ತಿರುವವರು ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಂಬೂರು ಗ್ರಾಮದಲ್ಲಿ ಮನೆಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ಜೆಡಿಎಸ್ ವತಿಯಿಂದ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಸೋಮವಾರಪೇಟೆ ತಾಲ್ಲೂಕಿನ ಜಂಬೂರು ಗ್ರಾಮದಲ್ಲಿ ನಿರ್ಮಿಸಿರುವ ಸುಮಾರು 383 ಮನೆಗಳ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲವೆಂದು ಟೀಕಿಸಿದರು.

ಮದೆ ಗ್ರಾಮದ ನೂತನ ಮನೆಗಳಿಗೆ ತೆರಳುವ ಗೋಳಿಕಟ್ಟೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಂತ್ರಸ್ತರಿಗೆ ಹಾಗೂ ಸ್ಥಳೀಯ ಗ್ರಾಮಸ್ಥರಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿಯಿದೆ. ಆದ್ದರಿಂದ, ಮಳೆ ಜೋರಾಗುವ ಮೊದಲು ರಸ್ತೆ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಗಣೇಶ್ ಒತ್ತಾಯಿಸಿದರು.

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಇಸಾಕ್ ಖಾನ್, ಖಜಾಂಚಿ ಡೆನ್ನಿ ಬರೋಸ್, ಕಾರ್ಯದರ್ಶಿ ಎನ್.ಸಿ.ಸುನಿಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಬೆಟ್ಟಗೇರಿ, ಗಣೇಶ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಲೀಲ್ ಬಾದ್ ಶಾ, ಮಡಿಕೇರಿ ನಗರ ಎಸ್.ಸಿ. ಘಟಕದ ಅಧ್ಯಕ್ಷ ಎಚ್.ಎ.ರವಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.