ಸೋಮವಾರಪೇಟೆ: ಜೆಡಿಎಸ್ ಜಿಲ್ಲಾ ಘಟಕಕ್ಕೆ ಹಂಗಾಮಿ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದನ್ನು ಖಂಡಿಸಿರುವ ಪಕ್ಷದ ಮುಖಂಡರು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಸೇರಿ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಿ ಪಕ್ಷದ ವರಿಷ್ಠರ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್ ಗೌಡ, ಜ.5ರಂದು ಕುಶಾಲನಗರದ ಹೋಟೆಲ್ನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕೆಲವೇ ಮಂದಿಯ ಸಮ್ಮುಖದಲ್ಲಿ ಕಾರ್ಮಾಡು ಸುಬ್ಬಣ್ಣ ಅವರನ್ನು ಜೆಡಿಎಸ್ ಹಂಗಾಮಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ನಿಯಮಬಾಹಿರ. ಈ ಆಯ್ಕೆಯನ್ನು ಪಕ್ಷದ ಮುಂಚೂಣಿ ಕಾರ್ಯಕರ್ತರು ಒಪ್ಪುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಹಿಂದಿನ ಜಿಲ್ಲಾಧ್ಯಕ್ಷರು ರಾಜೀನಾಮೆ ನೀಡಿರುವುದರಿಂದ, ಜಿಲ್ಲಾಧ್ಯಕ್ಷ ಸ್ಥಾನ ಖಾಲಿ ಇತ್ತು. ಆದರೆ, ಉಳಿದ ಪದಾಧಿಕಾರಿಗಳು ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಅನೇಕ ಪದಾಧಿಕಾರಿಗಳಿಗೆ ಮಾಹಿತಿಯನ್ನು ನೀಡದೆ, ಸಭೆ ಕರೆದಿದ್ದಾರೆ. ಸೋಮವಾರಪೇಟೆಯ ಸ್ವಯಂಘೋಷಿತ ನಾಯಕನೊಬ್ಬನ ಚಿತಾವಣೆಯಿಂದ ಇಂತಹ ಆಭಾಸಗಳು ನಡೆಯುತ್ತಿವೆ ಎಂದು ದೂರಿದರು.

ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಪಟ್ಟಣದಲ್ಲಿ ಮುಂದಿನ ದಿನಗಳಲ್ಲಿ ಸಭೆ ಕರೆದು, ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ, ಜೆಡಿಎಸ್ ಹೈಕಮಾಂಡ್ಗೆ ಕಳುಹಿಸಿ ಒಪ್ಪಿಗೆ ಪಡೆಯಲಾಗುವುದು ಎಂದರು.

ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಕೆ.ಟಿ. ಪರಮೇಶ್ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಮುಂದಾಗದ ಕೆಲ ನಾಯಕರು ಚುನಾವಣೆ ಸಂದರ್ಭ ಮಾತ್ರ ಕಾರ್ಯಚರಣೆಗೆ ಇಳಿಯುತ್ತಾರೆ. ನಂತರ ಪಕ್ಷವನ್ನು ಮರೆಯುತ್ತಾರೆ. ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಾರಂಭವಾಗುವ ಲಕ್ಷಣಗಳು ಗೋಚರಿಸುತ್ತಿರುವುದರಿಂದ ಸಭೆ ನಡೆಸಿ, ನಿಯಮ ಬಾಹಿರ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿರುವುದು ಪಕ್ಷದ ಸಂಘಟನೆಗೆ ಹಾನಿಯಾಗುತ್ತಿದೆ. ಹಂಗಾಮಿ ಅಧ್ಯಕ್ಷರ ಆಯ್ಕೆಯನ್ನು ಒಪ್ಪುವುದಿಲ್ಲ ಎಂದು ಹೇಳಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂದಣ್ಣ, ಸಂಘಟನಾ ಕಾರ್ಯದರ್ಶಿ ಆನಂದ್, ಹಿರಿಯ ಮುಖಂಡ ಹೊಸಬೀಡು ಹೂವಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.