ಮಡಿಕೇರಿ: ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಕೊಡಗಿನ ಜೆ.ಪಿ.ರಾಜು ಹಾಗೂ ಕೆ.ಎಂ.ಸೋಮಯ್ಯ ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಮಾವಿನಹಳ್ಳಿ ಗಿರಿಜನ ಹಾಡಿಯ ಜೆ.ಪಿ.ರಾಜು ಅವರು ಕರ್ನಾಟಕ ರಾಜ್ಯ ಲ್ಯಾಂಪ್ಸ್ ಮಹಾಮಂಡಳದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ವಿರಾಜಪೇಟೆಯ ಕೆ.ಎಂ.ಸೋಮಯ್ಯ ಅವರು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಸರ್ಕಾರ ರಾಜ್ಯಮಟ್ಟದಲ್ಲಿ ಒಟ್ಟು 71 ಮಂದಿಗೆ ಸಹಕಾರ ರತ್ನ ಪ್ರಶಸ್ತಿ ಪ್ರಕಟಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.