ಮಡಿಕೇರಿ: ಭಕ್ತಿಯನ್ನು ಸಾಮಾಜಿಕ ಸುಧಾರಣೆಗೆ, ಜ್ಞಾನೋಪಾಸನೆಗೆ ಬಳಸಿಕೊಂಡ ಕೀರ್ತನಾಕಾರರು ಯಾರಾದರೂ ಇದ್ದರೆ ಅದರಲ್ಲಿ ಮೊದಲು ನಿಲ್ಲುವವರು ಕನಕದಾಸರು ಮತ್ತು ಪುರಂದರದಾಸರು ಎಂದು ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ತಿಳಿಸಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಬೆಂಗಳೂರಿನ ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ‘ಮುತ್ತು ಬಂದಿದೆ ಕೇರಿಗೆ’ ರಸ ಗ್ರಹಣ ಶಿಬಿರ ಉದ್ಘಾಟಿಸಿ ಮಾತನಾಡಿದರು. ಭಕ್ತಿಯನ್ನು ಇಂದು ಬೀದಿಯ ಸರಕನ್ನಾಗಿ ನಾವು ನೋಡುತ್ತಿದ್ದೇವೆ. ಆದರೆ, ಭಕ್ತಿಯನ್ನು ಸಾಮಾಜಿಕ ಸುಧಾರಣೆಗೆ ಕನಕದಾಸರು ಬಳಸಿಕೊಂಡರು. ವಾಸ್ತವವಾಗಿ ಭಕ್ತಿ ಆತ್ಮನಿವೇದನೆಗೆ, ಸಾಮಾಜಿಕ ಬದುಕಿನಲ್ಲಿ ಸಂಸ್ಕಾರವನ್ನು ಮೂಡಿಸುವುದಕ್ಕೆ ಅಗತ್ಯ ಎಂದರು.

ಕನಕದಾಸರು ಭಕ್ತ ಮಾತ್ರ ಅಲ್ಲ, ಅವರು ಒಬ್ಬ ವಿಚಾರವಾದಿ ಮತ್ತು ಕವಿಯೂ ಅಗಿದ್ದರು ಎಂದು ಹೇಳಿದರು.

ಪ್ರಾಂಶುಪಾಲ ಮೇಜರ್ ಬಿ. ರಾಘವ ಮಾತನಾಡಿ, ‘ದಾಸರಲ್ಲಿ ಶ್ರೇಷ್ಠರು ಕನಕದಾಸರು. ಇವರು ಒಬ್ಬ ತತ್ವಜ್ಞಾನಿ, ಕವಿ ಮತ್ತು ಸಂಗೀತಗಾರರೂ ಆಗಿದ್ದರು. ಯಾರೇ ಅಗಿರಲಿ ಭಕ್ತಿ ಇದ್ದರೆ ಅವರಿಗೆ ದೇವರು ಒಲಿಯುತ್ತಾನೆ. ಮಾನವತಾವಾದಿಯಾದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು’ ಎಂದರು.

ಉಪನ್ಯಾಸಕ ಡಿ.ಪುರುಷೋತ್ತಮ ಮಾತನಾಡಿ, ‘ಕನಕದಾಸರ ಚಿಂತನೆಗಳ ಜೊತೆಗೆ ನಮ್ಮ ಇಡೀ ಭಾರತದ ಚರಿತ್ರೆಯನ್ನು ಗಮನಿಸಿದಾಗ ಇಬ್ಬರು ನಮಗೆ ಬಹಳ ಮುಖ್ಯರಾಗುತ್ತಾರೆ. ಅದರಲ್ಲಿ ಒಬ್ಬ ಅಶೋಕ. ಯುದ್ಧವನ್ನು ನಿರಾಕರಿಸಿದ ಮಹಾನ್ ಚಕ್ರವರ್ತಿ. ಕಳಿಂಗ ಯುದ್ಧದ ರಕ್ತಪಾತ ನೋಡಿ ಯುದ್ಧ ಬೇಡವೆಂದು ನಿರ್ಧರಿಸಿ ಬೌದ್ಧ ಧರ್ಮದ ಚಿಂತನೆಗಳನ್ನು ಅಳವಡಿಸಿಕೊಂಡು ವಿಶ್ವಕ್ಕೆ ಶಾಂತಿ ಸಂದೇಶ ನೀಡಿದವರು. ಅದೇ ರೀತಿ ಕರ್ನಾಟಕಕ್ಕೆ ಬಂದಾಗ ರಾಜಮನೆತನದ ವರ್ಚಸ್ಸು, ಅಧಿಕಾರ ಎಲ್ಲ ಇದ್ದ ಕನಕದಾಸ ಇನ್ನೊಬ್ಬರು ಎಂದರು.

‘ಶಾಂತಿ ಅನುಭವ ಆಗಬೇಕಾದರೆ ಯುದ್ಧದ ದುಷ್ಪರಿಣಾಮಗಳ ಅರಿವಿರಬೇಕು. ಎಲ್ಲಾ ವೃತ್ತಿಗಳ ಮೂಲ ಉದ್ದೇಶ ಮನುಷ್ಯನ ಮುಲಭೂತ ಆವಶ್ಯಕತೆಗಳಲ್ಲದೆ ಬೇರೇನಿಲ್ಲ. ಎಲ್ಲಾರು ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ ಎಂಬುದು ದಾಸರ ಕೀರ್ತನೆಯ ಸಾರ. ಮಾಹಿತಿ ಇದ್ದರೆ ಸಾಲದು ಜ್ಞಾನ ಇರಬೇಕು. ನಮ್ಮೊಳಗಿನ ನಾನತ್ವವನ್ನು ಕಳೆದುಕೊಳ್ಳುವುದು ಬಹಳ ಮುಖ್ಯ. ನಾನೇ ಎಂಬ ಅಹಂ ಇರಬಾರದು. ನಮ್ಮಲ್ಲಿ ಬಾಗುವ ಗುಣ ಇರಬೇಕು. ನನ್ನೊಳಗೂ ಸ್ವೀಕರಿಸುವ ಗುಣ ಇರಬೇಕು ಆಗ ನಾನತ್ವ ಹೋಗುತ್ತದೆ’ ಎಂದರು.

ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಪೂಣಚ್ಚ ಅವರು ಎಲ್ಲರನ್ನೂ ಸ್ವಾಗತಿಸಿದರು. ಡಾ.ಟಿ.ಎಸ್.ಮಹಾಲಕ್ಷ್ಮಿ, ವಿದ್ಯಾರ್ಥಿನಿ ಸಪ್ನ ಎಂ.ಶೇಟ್ ಕೀರ್ತನೆ, ವಿದ್ಯಾರ್ಥಿನಿ ವರ್ಷ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.