ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕತೆ ಸಾರುವ ಕಣಿವೆ ಜಾತ್ರೆ

ಕಾವೇರಿ ನದಿ ತೀರದ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ ಇಂದು
Last Updated 13 ಏಪ್ರಿಲ್ 2019, 7:10 IST
ಅಕ್ಷರ ಗಾತ್ರ

ಕುಶಾಲನಗರ: ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಐಕ್ಯತೆಯ ಕೊಂಡಿಯಾಗಿ ರೂಪುಗೊಂಡಿರುವ ಕಣಿವೆ ಗ್ರಾಮದಲ್ಲಿ ಏ.13ರಂದು ರಾಮಲಿಂಗೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.

ಉತ್ತರ ಕೊಡಗಿನ ಪವಿತ್ರ ಕಾವೇರಿ ನದಿಯ ದಂಡೆಯಲ್ಲಿರುವ ಕಣಿವೆ ರಾಮಲಿಂಗೇಶ್ವರ ಸ್ವಾಮಿಯ ವಾರ್ಷಿಕ ಬ್ರಹ್ಮ ರಥೋತ್ಸವವು ಮಧ್ಯಾಹ್ನ 12.28ರಿಂದ 1.48ಕ್ಕೆಸಲ್ಲುವ ಅಭಿಜಿನ್ ಮುಹೂರ್ತದಲ್ಲಿ ನಡೆಯಲಿದೆ. ನರಹರಿ ಶರ್ಮಾ ಅವರು ನೇತೃತ್ವ ವಹಿಸಲಿದ್ದಾರೆ.

ಯಾವುದೇ ಜಾತಿ, ಮತ ಭೇದವಿಲ್ಲದೇಎಲ್ಲರೂ ಒಗ್ಗೂಡಿ ದೇವರ ತೇರು ಎಳೆದು ಹಬ್ಬ ಆಚರಿಸುವ ಮೂಲಕ ಏಕತೆ ಸಾರುತ್ತಾ ಮಾದರಿ ಕ್ಷೇತ್ರವಾಗಿ ರೂಪುಗೊಂಡಿದೆ ಈ ಕಣಿವೆ.

ಯುಗಾದಿ ಹಬ್ಬ ಕಳೆದು 7 ದಿನಗಳಿಗೆ ಬ್ರಹ್ಮ ರಥೋತ್ಸವ ನಡೆಯುವುದು ಸಂಪ್ರದಾಯ. ರಥೋತ್ಸವಕ್ಕೆ ಜಿಲ್ಲೆಯ ಜನರೂ ಸೇರಿದಂತೆ ನೆರೆಯ ಹಾಸನ ಮತ್ತು ಮೈಸೂರು ಜಿಲ್ಲೆ ಗಡಿಭಾಗದ ಗ್ರಾಮಗಳಿಂದಲೂ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ರಥೋತ್ಸವದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಪ್ರತಿವರ್ಷ ಜತೆಯಾಗಿ ರಥವನ್ನು ಎಳೆಯುವ ಮೂಲಕ ಏಕತೆ ಸಾರುವುದು ಈ ರಥೋತ್ಸವದ ವಿಶೇಷ.

ಹೆಬ್ಬಾಲೆ ಬಸವೇಶ್ವರ ದೇವಸ್ಥಾನ ಸಮಿತಿ ಅವರು ಕಾಶಿಯಿಂದ ತೀರ್ಥವನ್ನು ತರಿಸಿ ಅದನ್ನು ಅಡ್ಡಪಲ್ಲಕ್ಕಿ ಮೂಲಕ ತಂದು ಕಣಿವೆ ರಾಮಲಿಂಗೇಶ್ವರನಿಗೆ ಪೂಜೆ, ಅಭಿಷೇಕ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಏ.17ರವರೆಗೆ ನಡೆಯುವ ಈ ವಾರ್ಷಿಕ ಜಾತ್ರೆಗೆ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಅಗತ್ಯ ಸಿದ್ಧತೆಯನ್ನು ಕೈಗೊಂಡಿದ್ದಾರೆ.

ತೂಗು ಸೇತುವೆ ಆಕರ್ಷಣೆ:ದಕ್ಷಿಣಗಂಗೆ ಕಾವೇರಿ ನದಿಯ ದಂಡೆ ಮೇಲಿರುವ ಕಣಿವೆ ರಾಮಲಿಂಗೇಶ್ವರ ದೇವಸ್ಥಾನ ಚೋಳರ ಕಾಲದಲ್ಲಿ ನಿರ್ಮಾಣಗೊಂಡಿದೆ. ದೇವಸ್ಥಾನದ ಪಕ್ಕದಲ್ಲಿಯೇ ಕಾವೇರಿ ನದಿಗೆ ಅಡ್ಡಲಾಗಿ ಶಿವಮೊಗ್ಗ ಮಲೆನಾಡು ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು ₹45 ಲಕ್ಷ ವೆಚ್ಚದಲ್ಲಿ ತೂಗು ಸೇತುವೆಯನ್ನು ನಿರ್ಮಿಸಲಾಗಿದ್ದು, ಇದು ಪ್ರವಾಸಿಗರ ಪ್ರಮುಖ ಆಕರ್ಷಣೀಯ ಕೇಂದ್ರವಾಗಿದೆ. ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ವತಿಯಿಂದ ದಾನಿಗಳ ಸಹಕಾರದೊಂದಿಗೆ ₹50 ಲಕ್ಷ ವೆಚ್ಚದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT