ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

Published : 10 ಸೆಪ್ಟೆಂಬರ್ 2024, 13:39 IST
Last Updated : 10 ಸೆಪ್ಟೆಂಬರ್ 2024, 13:39 IST
ಫಾಲೋ ಮಾಡಿ
Comments

ಸೋಮವಾರಪೇಟೆ: ಕರ್ನಾಟಕ ಸುವರ್ಣ ಸಂಭ್ರಮ ರಥ ಮಂಗಳವಾರ ಪಟ್ಟಣಕ್ಕೆ ಆಗಮಿಸಿತು.

ಕಕ್ಕೆಹೊಳೆ ಬಳೀಯ ಮುತ್ತಪ್ಪ ದೇವಾಲಯದ ಎದುರು ಕನ್ನಡ ರಥವನ್ನು ತಾಲ್ಲೂಕು ಆಡಳಿತ, ಕನ್ನಡ ಸಾಹಿತ್ಯ ಪರಿಷತ್, ಶಿಕ್ಷಣ ಇಲಾಖೆ, ಕನ್ನಡ ಸಂಘಟನೆಗಳ ಮುಖಂಡರು ಸ್ವಾಗತಿಸಿ, ಪುಷ್ಪನಮನ ಸಲ್ಲಿಸಿದರು.

ಸಂತ ಜೋಸೇಫರ ಪ್ರೌಢಶಾಲೆ, ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳ ಸಮ್ಮಖದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಥದೊಂದಿಗೆ ಮೆರವಣಿಗೆ ನಡೆಸಲಾಯಿತು. ಡೊಳ್ಳುಕುಣಿತ ನೋಡುಗರನ್ನು ಅಕರ್ಷಿಸಿತು.

ನಂತರ ಜೇಸಿ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ, ಮುಖ್ಯ ಶಿಕ್ಷಕ ಹೇಮಂತ್ ಮಾತನಾಡಿ, ‘ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ, ಸುವರ್ಣ ಮಹೋತ್ಸವದ ಅಂಗವಾಗಿ 10 ತಿಂಗಳ ಹಿಂದೆ ಹಂಪಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಾಗಿತ್ತು. ಈಗಾಗಲೇ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಸಂಚರಿಸಿದ್ದು, ಕೊಡಗು ಜಿಲ್ಲೆಯಲ್ಲಿ ಸೋಮವಾರದಿಂದ ಯಾತ್ರೆ ಆರಂಭವಾಗಿದೆ’ ಎಂದರು.

‘ರಥ ರಾಜ್ಯದೆಲ್ಲೆಡೆ ಸಂಚರಿಸಿ ಕರ್ನಾಟಕದ ಶ್ರೀಮಂತ ಇತಿಹಾಸ, ಪರಂಪರೆ, ಸಂಸ್ಕೃತಿ, ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ’ ಎಂದು ಹೇಳಿದರು.

ಸಾಹಿತಿಗಳಾದ ಸುನಿತಾ, ಜಲಜಾ ಶೇಖರ್ ಅವರು ಕರ್ನಾಟಕ ಏಕೀಕರಣ ಹೋರಾಟದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶೀಧರ್ ಕಂಕನವಾಡಿ, ಬಿಇಒ ಎಸ್. ಭಾಗ್ಯಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ್, ಕರವೇ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ನಗರ ಅಧ್ಯಕ್ಷ ಮಂಜುನಾಥ್, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಮುಖರಾದ ಎಚ್.ಸಿ.ನಾಗೇಶ್, ಜಯಪ್ಪ ಹಾನಗಲ್ಲು, ಟಿ.ಈ. ಸುರೇಶ್, ಎಚ್.ಎ. ನಾಗರಾಜ್, ಶಾಲಾ ಶಿಕ್ಷಕರು ಇದ್ದರು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ ನೋಡುಗರನ್ನು ಅಕರ್ಷಿಸಿತು
ಮೆರವಣಿಗೆಯಲ್ಲಿ ಡೊಳ್ಳು ಕುಣಿತ ನೋಡುಗರನ್ನು ಅಕರ್ಷಿಸಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT