ಮಡಿಕೇರಿ: ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಲೇಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ ₹ 5 ಸಾವಿರ, ಎರಡನೇ ಹಂತದಲ್ಲಿ ₹ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ 60ರಷ್ಟು ಪ್ರದರ್ಶಿಸಬೇಕು ಇಲ್ಲವೇ ಬರೆಸಿರಬೇಕು ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಸ್ಥಳೀಯ ಸಂಸ್ಥೆ ವ್ಯಾಪ್ತಿಯ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕ ಕುಮಾರ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ಆರ್.ಶೆಟ್ಟಿ, ಪಶುಪಾಲನಾ ಇಲಾಖೆಯ ಉಪ ನಿದೇಶಕ ಲಿಂಗರಾಜ ದೊಡ್ಡಮನಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜ್ಯೋತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಂಗಾಧರ ನಾಯಕ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಎಸ್.ಎಸ್.ದೀಪಕ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಪಿಎಂಜಿಎಸ್ವೈ ಎಂಜಿನಿಯರ್ ಪ್ರಭು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪೌರಾಯುಕ್ತ ಎಚ್.ಆರ್.ರಮೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.