ಮಡಿಕೇರಿ: ‘ನ.1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸುವ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕೋವಿಡ್-19 ಹಿನ್ನೆಲೆ, ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ರಾಜ್ಯೋತ್ಸವ ಆಚರಿಸಬೇಕಿದೆ. ಇದರೊಂದಿಗೆ ಶಿಷ್ಟಾಚಾರದ ಅನ್ವಯ ಕಾರ್ಯಕ್ರಮಗಳು ನಡೆಯಬೇಕು. ವ್ಯವಸ್ಥಿತ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಿಸಬೇಕು’ ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ನಿಟ್ಟಿನಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಮಳೆ ಇದ್ದಲ್ಲಿ ನಗರದ ಕೋಟೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ಕಾರ್ಯ ನಿರ್ವಹಿಸಲಿದೆ. ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳನ್ನು ಸ್ವಾಗತಿಸಬೇಕು. ಇದರೊಂದಿಗೆ ವಿವಿಧ ಸಮಿತಿಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಜಿ.ಪಂ ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ, ಡಿವೈಎಸ್‍ಪಿ ದಿನೇಶ್ ಕುಮಾರ್, ಪೊಲೀಸ್ ಇನ್‌ಸ್ಪೆಕ್ಟರ್ ರಾಚಯ್ಯ, ತಾ.ಪಂ ಇಒ ಲಕ್ಷ್ಮಿ, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಪೌರಾಯುಕ್ತ ರಾಮದಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಹಾಲಿಂಗಯ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಬಾನಾ, ಕಾರ್ಮಿಕ ಇಲಾಖೆ ಅಧಿಕಾರಿ ಅನಿಲ್ ಭಗಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ದೇವಕಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.