ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ: ಮೂವರಿಗೆ ಕರ್ನಾಟಕ ಛಾಯಾ ರತ್ನ ಪ್ರಶಸ್ತಿ

Published 8 ಜುಲೈ 2024, 15:17 IST
Last Updated 8 ಜುಲೈ 2024, 15:17 IST
ಅಕ್ಷರ ಗಾತ್ರ

ಸೋಮವಾರಪೇಟೆ: ಫೋಟೋಗ್ರಾಫಿ ಮತ್ತು ವಿಡಿಯೋಗ್ರಫಿ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಕೊಡಗಿನ ಮೂವರು ಕರ್ನಾಟಕ ಛಾಯಾ ರತ್ನ ಪ್ರಶಸ್ತಿಗೆ ಭಾಜನರಾದರು.

ಕರ್ನಾಟಕ ವೀಡಿಯೊ ಮತ್ತು ಫೋಟೋ ಅಸೋಸಿಯೇಷನ್, ಬೈಸೇಲ್ ಇಂಟ್ರಾಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ದಕ್ಷಿಣ ಕೊಡಗು ಛಾಯಾಗ್ರಾಹಕರ ಸಂಘದ ಆರ್.ಜಾನ್, ಸೋಮವಾರಪೇಟೆ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಹರೀಶ್ ಕೋಟ್ಯಾನ್ ಮತ್ತು ಶ್ರೀಕಾವೇರಿ ಛಾಯಾಗ್ರಾಹಕರ ಸಂಘದ ಎಸ್.ಆರ್.ಭರತ್ ಅವರಿಗೆ ಪ್ರಶಸ್ತಿ ನೀಡಲಾಯಿತು.

ಕನ್ನಡ ಚಲನಚಿತ್ರ ನಿರ್ದೇಶಕ ಮತ್ತು ಛಾಯಾಗ್ರಾಹಕ ಜೆ.ಜೆ.ಕೃಷ್ಣ, ನಟ ಪ್ರಥಮ್, ಕಿರುತೆರೆ ನಟ ವಿಕ್ರಂ ಸೂರಿ ಮತ್ತು ಫೋಟೋ ಟುಡೇ ನಿರ್ದೇಶಕ ಎಚ್.ವಿ. ಕೃಷ್ಣಪ್ಪ ಪಾಲ್ಗೊಂಡಿದ್ದರು.

ಕೊಡಗು ಜಿಲ್ಲಾ ಛಾಯಾಚಿತ್ರಗ್ರಾಹಕರ ಕ್ಷೇಮಭಿವೃದ್ಧಿ ಸಂಘ ಜಿಲ್ಲಾಧ್ಯಕ್ಷ ಎಸ್.ಆರ್.ವಸಂತ್, ಪ್ರಧಾನ ಕಾರ್ಯದರ್ಶಿ ಸಾಲೋಮನ್ ಡೇವಿಡ್, ದಕ್ಷಿಣ ಕೊಡಗು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಡಿ.ಸಿ.ರವೀಂದ್ರ, ಕುಶಾಲನಗರ ತಾಲ್ಲೂಕು ಶ್ರೀಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ಸೋಮವಾರಪೇಟೆ ತಾಲ್ಲೂಕು ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿನಯ್ ಕುಮಾರ್, ಪ್ರಧಾನ ಕಾರ್ಯಾಚರಣೆ ವಿನೋದ್ ಜಯರಾಮ್, ಸುಬ್ರಮಣಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT