ಶನಿವಾರ, ಸೆಪ್ಟೆಂಬರ್ 19, 2020
22 °C
ಎನ್‌ಡಿಆರ್‌ಎಫ್‌ ಕಾರ್ಯಾಚರಣೆ, ಇನ್ನೂ ನಾಲ್ವರಿಗೆ ಹುಡುಕಾಟ

ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಒಂದು ಮೃತದೇಹ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿತವಾಗಿರುವ ಸ್ಥಳದಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಎನ್‌ಡಿಆರ್‌ಎಫ್‌ ಕಾರ್ಯಾಚರಣೆ ಆರಂಭಿಸಿದ್ದು ಒಂದು ಮೃತದೇಹ ಪತ್ತೆಯಾಗಿದೆ. 

ಕ್ಷೇತ್ರದ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್‌ ಅವರ ಅಣ್ಣ ಆನಂದ ತೀರ್ಥ ಸ್ವಾಮಿ (86) ಅವರ ಮೃತದೇಹವೆಂದು ಗುರುತಿಸಲಾಗಿದೆ. ಇನ್ನೂ ಕಣ್ಮರೆಯಾದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.  

ತಲಕಾವೇರಿ ಭಾಗದಲ್ಲಿ ಮಳೆಯ ಅಬ್ಬರ ಕೊಂಚ ತಗ್ಗಿದ್ದು ಕುಸಿದ ಬೆಟ್ಟದ ಸ್ಥಳದ ಕೆಸರು ಮಣ್ಣಿನ ನಡುವೆ ಎನ್‌ಡಿಆರ್‌ಎಫ್‌ ಸಿಬ್ಬಂದಿ ಕಾರ್ಯಾಚರಣೆ ಸಾಗುತ್ತಿದೆ. ಸ್ಥಳವು ಅತ್ಯಂತ ಅಪಾಯಕಾರಿಯಾಗಿದೆ. ಹಗ್ಗದ ನೆರವು ಪಡೆದು ಭೂಕುಸಿತ ಸ್ಥಳದಲ್ಲಿ ರಕ್ಷಣಾ ಪಡೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಭಾಗಮಂಡಲದಲ್ಲೂ ನೀರಿನ ಪ್ರಮಾಣ ಇಳಿಯುತ್ತಿದೆ. ನೀರಿನ ಪ್ರಮಾಣ ಇಳಿದಿರುವ ಕಾರಣ ಜೆಸಿಬಿಯನ್ನು ತಲಕಾವೇರಿ ತರಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿ ತನಕವು ರಸ್ತೆಯಲ್ಲಿ ಕುಸಿದಿದ್ದ ಮಣ್ಣನ್ನು ತೆರವು ಮಾಡಲಾಗಿದೆ.


ಆನಂದ ತೀರ್ಥ ಸ್ವಾಮಿ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು