ಮಂಗಳವಾರ, ಸೆಪ್ಟೆಂಬರ್ 21, 2021
21 °C

ಕೊಡಗು: ಧಾರಾಕಾರ ಮಳೆ, ಹಲವೆಡೆ ಸಂಪರ್ಕ ಕಡಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ.‌ ಮಳೆ ಹಾಗೂ ಭಾರೀ ಗಾಳಿಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ನದಿಯು ಉಕ್ಕಿ ಹರಿಯುತ್ತಿದ್ದು ಅಲ್ಲಲ್ಲಿ ಸಂಪರ್ಕ ಕಡಿತವಾಗಿದೆ.

ನಾಪೋಕ್ಲು- ಅಯ್ಯಂಗೇರಿ ಹಾಗೂ ನಾಲ್ಕೇರಿ- ಶ್ರೀಮಂಗಲ ರಸ್ತೆ ಸಂಪರ್ಕ ಕಡಿತವಾಗಿದೆ. ಗದ್ದೆ ಬಯಲು ಸಮುದ್ರದಂತೆ ಕಾಣಿಸುತ್ತಿವೆ.

ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಶಾಲನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು