ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ಒಟ್ಟು ಜಿಲ್ಲೆಯಲ್ಲಿ ಜೂನ್ ತಿಂಗಳಿನ ಆರಂಭದಿಂದ 22ರವರೆಗೂ ಶೇ 16ರಷ್ಟು ಹೆಚ್ಚು ಮಳೆಯಾಗಿದೆ. ಅದರಲ್ಲೂ ಒಂದು ವಾರದ ಅವಧಿಯಲ್ಲಿ ಅಧಿಕ ಮಳೆ ಸುರಿದಿದೆ. ವಾಡಿಕೆ ಮಳೆ 36 ಸೆಂ.ಮೀ ಬರಬೇಕಿದ್ದ ಕಡೆ 42 ಸೆಂ.ಮೀನಷ್ಟು ಸುರಿದಿದೆ. ಇನ್ನೂ ಮಾಸಾಂತ್ಯಕ್ಕೆ 7 ದಿನಗಳು ಇರುವುದರಿಂದ, ಈ ಅವಧಿಯಲ್ಲಿ ಇನ್ನಷ್ಟು ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ಇರುವುದರಿಂದ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಗಳೇ ಹೆಚ್ಚಿವೆ.

ಆದರೆ, ಈ ಮಳೆ ಜಿಲ್ಲೆಯ ಎಲ್ಲ ಭಾಗಕ್ಕೂ ಸಮಾನವಾಗಿ ಹಂಚಿಕೆಯಾಗಿಲ್ಲ. ಜೂನ್ ತಿಂಗಳಿನಲ್ಲಿ ಎಲ್ಲೆಡೆ ಉತ್ತಮ ಮಳೆ ಸುರಿಯುತ್ತಿದೆ ಎಂದು ಅನ್ನಿಸಿದರೂ ಜಿಲ್ಲೆಯ ಇನ್ನೂ 5 ಹೋಬಳಿಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ. ಅದರಲ್ಲು ಭಾಗಮಂಡಲ ಹಾಗೂ ಪೊನ್ನಂಪೇಟೆ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ದತ್ತಾಂಶಗಳು ಹೇಳುತ್ತವೆ.

ಜೂನ್ ತಿಂಗಳ ಆರಂಭದಿಂದ ಹಿಡಿದು 22ರವರೆಗಿನ ಅಂಕಿಅಂಶಗಳನ್ನು ಗಮನಿಸಿದರೆ ಪೊನ್ನಂಪೇಟೆ ಹೋಬಳಿಯಲ್ಲಿ ಶೇ 28ರಷ್ಟು ಮಳೆ ಕೊರತೆ ಉಂಟಾಗಿದೆ. ವಾಡಿಕೆ ಮಳೆ 33.5 ಸೆಂ.ಮೀನಷ್ಟು ಬರಬೇಕಿತ್ತು. ಬಂದಿರುವುದು 24.3 ಸೆಂ.ಮೀ ಮಾತ್ರ. ಅದೇ ರೀತಿ ಭಾಗಮಂಡಲದಲ್ಲಿ 83 ಸೆಂ.ಮೀ ಮಳೆ ಸುರಿಯಬೇಕಿತ್ತು. ಆದರೆ, ಬಂದಿರುವುದು ಕೇವಲ 64 ಸೆಂ.ಮೀ ಮಾತ್ರ. ಬರೋಬರಿ ಶೇ 23ರಷ್ಟು ಕೊರತೆ ಎದುರಾಗಿದೆ. ಈ ಎರಡು ತಾಲ್ಲೂಕುಗಳನ್ನು ಬಿಟ್ಟರೆ ಉಳಿದಂತೆ, ವಿರಾಜಪೇಟೆ, ಸಂಪಾಜೆ, ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲೂ ಮಳೆ ಕೊರತೆ ಎದುರಾಗಿದೆ.

ಇದಕ್ಕೆ ವ್ಯತಿರಿಕ್ತವಾಗಿ ಕುಶಾಲನಗರ ಹೋಬಳಿಯಲ್ಲಿ ಈ ಬಾರಿ ಶೇ 170ರಷ್ಟು ಅತ್ಯಧಿಕ ಮಳೆ ಸುರಿದಿದೆ. ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಶೇ 132ರಷ್ಟು ಹೆಚ್ಚು ಮಳೆಯಾಗಿದೆ. ಉಳಿದಂತೆ, ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲೂ ಶೇ 116ರಷ್ಟು ಹೆಚ್ಚು ಮಳೆ ಸುರಿದಿದೆ. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಹೋಬಳಿಯಲ್ಲೂ ಶೇ 35ರಷ್ಟು ಹೆಚ್ಚು ಮಳೆಯಾಗಿದೆ. ಉಳಿದ ಹೋಬಳಿಗಳಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಿದೆ.

ಒಟ್ಟಾರೆ, ಜನವರಿಯಿಂದ ಜೂನ್ 22ರವರೆಗೆ ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಶೇ 214ರಷ್ಟು, ಶಾಂತಳ್ಳಿ ಹೋಬಳಿಯಲ್ಲಿ ಶೇ 205ರಷ್ಟು ಹಾಗೂ ಕುಶಾಲನಗರ ಹೋಬಳಿಯಲ್ಲಿ ಶೇ 204ರಷ್ಟು ಹೆಚ್ಚು ಮಳೆ ಸುರಿದಿದೆ.

ಸದ್ಯ, ಜನವರಿಯಿಂದ ಜೂನ್ 22ರವರೆಗೆ ಕೊಡಗು ಜಿಲ್ಲೆಯ ಯಾವುದೇ ಹೋಬಳಿಯಲ್ಲೂ ಮಳೆ ಕೊರತೆ ಎದುರಾಗಿಲ್ಲ. ಎಲ್ಲೆಡೆ ವಾಡಿಕೆಗಿಂತಲೂ ಅಧಿಕ ಮಳೆ ಬಿದ್ದಿದೆ.

ಜೂನ್ 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಮುಂಬರುವ ತಿಂಗಳುಗಳಲ್ಲಿಯೂ ಅಧಿಕ ಮಳೆಯ ಮುನ್ಸೂಚನೆ

‘28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ’

ಮೈಸೂರಿನ ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ತಾಂತ್ರಿಕ ಅಧಿಕಾರಿ ಜಿ.ವಿ.ಸುಮಂತಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ ‘ಕೊಡಗು ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು. ಜುಲೈನಲ್ಲಿ ತುಸು ಅಧಿಕ ಹಾಗೂ ಆಗಸ್ಟ್ನಲ್ಲಿ ಭಾರಿ ಮಳೆ ಬೀಳುವ ಸಂಭವ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.