ಮಡಿಕೇರಿ: ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆ ನಿಯಂತ್ರಣಕ್ಕೆ ಬಂದಿದ್ದರೂ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಭಾಗದಲ್ಲಿ ಮಾತ್ರ ಮಳೆ ಸುರಿಯುತ್ತಲೇ ಇದೆ. ಇನ್ನುಳಿದ ಕಡೆ ಸಾಮಾನ್ಯ ಮಳೆ ಮುಂದುವರಿದಿದೆ.

ಶಾಂತಳ್ಳಿಯಲ್ಲಿ 6 ಸೆಂ.ಮೀಗೂ ಅಧಿಕ ಮಳೆಯಾಗಿದೆ. ಕಳೆದ ಹಲವು ದಿನಗಳಿಂದ ಇಲ್ಲಿಯೇ ಅತ್ಯಧಿಕ ಮಳೆ ಸುರಿಯುತ್ತಿದೆ.

ಮಡಿಕೇರಿ ನಗರದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ನಡುನಡುವೆ ಕೆಲ ಹೊತ್ತು ಬಿಸಿಲೂ ಬರುತ್ತಿದೆ. ಆದರೆ, ಗಾಳಿಯ ವೇಗ ಕಡಿಮೆಯಾಗಿಲ್ಲ. ಬುಧವಾರವೂ ಗಾಳಿ, ಮಳೆ ನಗರದಲ್ಲಿ ಮುಂದುರಿದಿತ್ತು.

ಕೊಡಗು ಜಿಲ್ಲೆಯಲ್ಲಿ ಸರಾಸರಿ 1.5 ಸೆಂ.ಮೀ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ 1.4, ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 3.70 ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಸರಾಸರಿ 1.2, ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 3.6, ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ 1 ಸೆಂ.ಮೀನಷ್ಟು ಮಳೆಯಾಗಿದೆ.

ಹೋಬಳಿವಾರು ದಾಖಲಾಗಿರುವ ಮಳೆ ಗಮನಿಸಿದರೆ, ಶಾಂತಳ್ಳಿಯಲ್ಲೇ ಅತ್ಯಧಿಕ 6.4 ಸೆಂ.ಮೀನಷ್ಟು ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ 1.2, ನಾಪೋಕ್ಲು 1, ಸಂಪಾಜೆ 1.2, ಭಾಗಮಂಡಲ 2.5, ಹುದಿಕೇರಿ 3.3, ಸೋಮವಾರಪೇಟೆ 3.9, ಶನಿವಾರಸಂತೆ 1.5, ಕೊಡ್ಲಿಪೇಟೆ 2.8, ಸುಂಟಿಕೊಪ್ಪ 1.7 ಸೆಂ.ಮೀ ಮಳೆಯಾಗಿದೆ.

ಸೋಮವಾರಪೇಟೆ: ಸಾಧಾರಣ ಮಳೆ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ಮತ್ತು ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು ಸೋಮವಾರಪೇಟೆ ಸೇರಿದಂತೆ ಇತರೆಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಗ್ರಾಮೀಣ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಹೊಳೆ ತೊರೆಗಳು ತುಂಬಿ ಹರಿಯುತ್ತಿದೆ. ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಟ್ಲು ಮುಕ್ಕೋಡ್ಲು ಭಾಗಗಳಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಟ್ಟಿಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.